‘ಬಿಂಗಾರೆ ಕಲ್ಲು’ ಲೇಖಕ ಹಾಡ್ಲಹಳ್ಳಿ ನಾಗರಾಜ್ ಅವರ ಕಿರು ಕಥೆಗಳ ಸಂಕಲನ. ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಪ್ರಕಾರ “ಲೇಖಕರ ಕಾಡಿನ ಅನುಭವ ಅದೆಷ್ಟು ಅಧಿಕೃತವೂ, ಸಾಂಸ್ಕೃತಿಕವೂ ಆಗಿದೆ ಎಂದರೆ ಓದಿನ ಜೊತೆಗೆ ನಾವೂ ಕಾಡಿನಲ್ಲಿ ಪಯಣಿಸುವ ಅನುಭವಕ್ಕೆ ಒಳಗಾಗುತ್ತೇವೆ. ಕಾಡಿನ ದಟ್ಟತೆ, ನಿಗೂಢತೆಗಳನ್ನು ಇಲ್ಲಿಯ ಕಿರು ಕಥೆಗಳ ಗಾಢವಾಗಿ ಹಿಡಿದಿಡಲಾಗಿದೆ.
ಹಾಡ್ಲಹಳ್ಳಿ ನಾಗರಾಜು ಅವರು ಮೂಲತಃ ಹಾಸನಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಾಡ್ಲಹಳ್ಳಿ ಗ್ರಾಮದವರು. ತಂದೆ- ಗುರುಶಾಂತೇಗೌಡರು, ತಾಯಿ- ಪುಟ್ಟಮ್ಮ. ಕಡುಬಡತನದ ರೈತಾಪಿ ಕುಟುಂಬದಲ್ಲಿ ಜನಿಸಿದ ಅವರು ಬಿ.ಎಸ್ಸಿ ಪದವೀಧರರಾಗಿದ್ದು, ಎನ್.ಸಿ.ಸಿ ಇಲಾಖೆಯಲ್ಲಿ 36 ವರ್ಷಗಳ ಕಾಲ ಸೇವೆಸಲ್ಲಿಸಿದ್ದಾರೆ. ಅಲ್ಲದೇ ಅವರ ಕಾರ್ಯವೈಖರಿಯಿಂದಾಗಿ ಮುಖ್ಯಮಂತ್ರಿಗಳ ಶ್ಲಾಘನಾಪತ್ರಕ್ಕೆ ಪಾತ್ರರಾಗಿದ್ದಾರೆ. ಎನ್.ಸಿ.ಸಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಂತರ ಅದೇ ಇಲಾಖೆಯಲ್ಲಿ ಗೆಜೆಟೆಡ್ ಅಧಿಕಾರಿಯಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಪ್ರಸ್ತುತ ಹಾಸನ ನಗರ ಸಮೀಪ ಅತ್ತಿಹಳ್ಳಿ ಎಂಬ ಗ್ರಾಮದಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಅಪ್ಪಟ ಮಲೆನಾಡಿನ ಪರಿಸರದಲ್ಲಿ ಹುಟ್ಟಿಬೆಳೆದ ನಾಗರಾಜು ಅವರು ಕನ್ನಡ ಸಾಹಿತ್ಯಲೋಕದಲ್ಲಿ ತಮ್ಮದೇ ಛಾಪುಮೂಡಿಸಿದ್ದಾರೆ. ...
READ MORE