ಬಿಸಿಲ ಕಾಡಿನ ಹಣ್ಣು-ಕವಿ ವಿಕ್ರಮ ವಿಸಾಜಿ ಅವರ ಕವನ ಸಂಕಲನ. ಕವನಗಳ ವಸ್ತು, ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆಯ ಎಚ್ಚರ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಒಟ್ಟು 43 ಕವನಗಳು ಓದುಗರ ಗಮನ ಸೆಳೆಯುತ್ತವೆ. ಉತ್ತರ ಕರ್ನಾಟಕದ ವಿಶೇಷವಾಗಿ ಬಿಸಿಲು ಪ್ರದೇಶ ಬೀದರ ಜಿಲ್ಲೆಯವರಾದ ಲೇಖಕರು ಬಿಸಿಲು ಕಾಡಿನ ತಮ್ಮ ಅನುಭವಗಳನ್ನು ಕವನಗಳ ಮೂಲಕ ತೋರಿದ್ದಾರೆ. ಬಿಸಿಲು ಕಾಡಿನ ಹಣ್ಣುಗಳ ರುಚಿ ಹೆಚ್ಚಿರುವಂತೆ ಕವನಗಳು ಅರ್ಥಪೂರ್ಣವಾಗಿವೆ.
ಕಲಬುರ್ಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕರಾಗಿರುವ ವಿಕ್ರಮ ವಿಸಾಜಿ ಅವರು ಕವಿ-ವಿಮರ್ಶಕ. ಬೀದರ ಜಿಲ್ಲೆಯ ಭಾಲ್ಕಿಯವರಾದ ವಿಕ್ರಮ ಅವರ ತಂದೆ ಹೆಸರಾಂತ ಕವಿ-ಲೇಖಕರು. ಬಾಲ್ಯದಲ್ಲಿಯೇ ಕವಿತೆ ಬರೆಯುವುದನ್ನು ಆರಂಭಿಸಿದ ವಿಕ್ರಮ ಅವರು ಹೈಸ್ಕೂಲಿನಲ್ಲಿದ್ದಾಗಲೇ ಕವನ ಸಂಕಲನ ಪ್ರಕಟಿಸಿದ್ದರು. ಕಲಬುರ್ಗಿಯ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎ) ಪದವಿ ಪಡೆದ ಅವರು ಕಂಬಾರರ ಕಾವ್ಯದ ಮೇಲೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ ಸೊಂಡೂರು, ರಾಯಚೂರು ಸ್ನಾತಕೋತ್ತರ ಕೇಂದ್ರಗಳಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ...
READ MORE