ಬಿತ್ತರ (ಆಯ್ದ ಲೇಖನಗಳು)

Author : ಕಮಲಾ ಹಂಪನಾ

Pages 252

₹ 60.00




Year of Publication: 1998
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಕಮಲಾ ಹಂಪನಾ ರವರು ವಿದ್ವಾಂಸರಾಗಿ, ಉತ್ತಮ ಪ್ರಾಧ್ಯಾಪಕರಾಗಿ, ಸೃಜನಶೀಲ ಲೇಖಕಿಯಾಗಿ, ಶ್ರೇಷ್ಠವಾಗ್ಮಿಯಾಗಿ, ನಿರ್ಭೀತ ವಿಚಾರಕರಾಗಿ, ಪ್ರೌಢ ವಿಮರ್ಶಕರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಸಂಶೋಧನೆಗಳನ್ನು ಕೈಗೊಂಡು ಎಲ್ಲಾ ಪ್ರಕಾರಗಳಲ್ಲಿಯೂ ಉತ್ತಮ ಕೊಡುಗೆಯನ್ನು ನೀಡಿದ್ದಾರೆ. ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಸಾರ್ಥಕವಾದ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡಿದ್ದಾರೆ. ಬರೆದಿರುವ ವಿಮರ್ಶಾ ಲೇಖನಗಳು, ಮಾಡಿದ ಆಧ್ಯಕ್ಷ ಭಾಷಣಗಳು ಮತ್ತು ನೀಡಿದ ವಿಶಿಷ್ಟ ಉಪನ್ಯಾಸಕಗಳ ವಿವರಗಳನ್ನು ಈ ಪುಸ್ತಕದಲ್ಲಿ ಕೊಡಲಾಗಿದೆ.

About the Author

ಕಮಲಾ ಹಂಪನಾ
(28 October 1935 - 22 June 2024)

ಲೇಖಕಿಯಾಗಿ ಚಿರಪರಿಚಿತರಾಗಿರುವ ಕಮಲಾ ಹಂಪನಾ ಅವರು ಪ್ರಾಕೃತ, ಜೈನಶಾಸ್ತ್ರದಲ್ಲಿ ಪರಿಣಿತರು. ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ 1935ರ ಅಕ್ಟೋಬರ್ 28 ರಂದು ಜನಿಸಿದರು. ತಂದೆ ಸಿ. ರಂಗಧಾಮನಾಯಕ್- ತಾಯಿ ಲಕ್ಷಮ್ಮ. ಚಳ್ಳಕೆರೆಯಲ್ಲಿ ಪ್ರಾರಂಭವಾದ ಪ್ರಾಥಮಿಕ ವಿದ್ಯಾಭ್ಯಾಸ ಬೇರೆ ಬೇರೆ ಊರುಗಳಲ್ಲಿ ಮುಂದುವರಿಯಿತು. ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ, ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಮುಂದುವರೆದು ಬಿ.ಎ. ಆನರ್ಸ್ (1958) ಮಾಡಿದರು. ಕನ್ನಡ ಅಧ್ಯಾಪಕಿಯಾಗಿ (1959) ಶಿಕ್ಷಣ ವೃತ್ತಿಗೆ ಪ್ರವೇಶಿಸಿ, ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೆಂಗಳೂರಿನ ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದರು. ಸರ್ಕಾರಿ ...

READ MORE

Related Books