ಅನೇಕ ಕನ್ನಡ ಮನಸ್ಸುಗಳ ಲೇಖನ, ಬರಹಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಗೊಂಡ ಅನೇಕ ಬ್ಲಾಗ್ ಬರಹಗಳನ್ನು ಒಂದೆಡೆ ಸೇರಿಸಿ ಲೇಖಕಿ ಚೇತನಾ ತೀರ್ಥಹಳ್ಳಿ, ಹಾಗೂ ಸುಶ್ರೂತ ದೊಡ್ಡೇರಿಯವರು ಸಂಗ್ರಹಿಸಿದ್ದಾರೆ. ಈ ಬ್ಲಾಗ್ ಬರಹಗಳ ಒಟ್ಟಾರೆ ಸಂಗ್ರಹ ರೂಪವೇ ’ಬ್ಲಾಗಿಸು ಕನ್ನಡ ಡಿಂಡಿಮವ’ ಪುಸ್ತಕ.
ಹುಟ್ಟೂರು ತೀರ್ಥಹಳ್ಳಿ. ಮೂಲ ಹೆಸರು ಗಾಯತ್ರಿ. ಅಲಾವಿಕಾ ಮತ್ತೊಂದು ಕಾವ್ಯನಾಮ. ಮೂವತ್ತು ವರ್ಷಗಳಿಂದ ಗದ್ಯ - ಪದ್ಯ ರಚನೆಯಲ್ಲಿ ತೊಡಗಿಕೊಂಡಿದ್ದು, ಸ್ವತಂತ್ರ ಕೃತಿ, ಅನುವಾದ, ಸಂಪಾದನೆ ಸೇರಿದಂತೆ 15 ಪುಸ್ತಕಗಳು ಪ್ರಕಟವಾಗಿವೆ. ‘ಉಫೀಟ್’ – ಉದಯೋನ್ಮುಖ ಬರಹಗಾರರ ಪ್ರೋತ್ಸಾಹ ಧನ ಯೋಜನೆಯಡಿಯಲ್ಲಿ ಪ್ರಕಟಗೊಂಡ ಮೊದಲ ಪದ್ಯ ಸಂಕಲನ. ‘ಭಾಮಿನಿ ಷಟ್ಪದಿ’ ಅಂಕಣ ಸಂಕಲನವಾಗಿದ್ದು, ಎರಡು ಮುದ್ರಣ ಕಂಡಿದೆ. ‘ಗುಟ್ಟು ಬಚ್ಚಿಡಲು ಬರುವುದಿಲ್ಲ’, ‘ಶಬರಿಯ ಅವಸರ’ ಮತ್ತು ‘ಸೂರ್ಯನೆದೆಯ ನೀರಬೀಜ’ ಮುದ್ರಿತ ಪದ್ಯ ಸಂಕಲನಗಳು; ‘ಕಣೇ ಲಾ ಪದ್ಯಗಳು’ ಇ - ಬುಕ್ ಸಂಕಲನವಾಗಿ ಪ್ರಕಟವಾಗಿದೆ. ‘ಬಿಸಿಲ ಚೂರಿನ ಬೆನ್ನು’, ‘ಅಧ್ಯಾತ್ಮ ಡೈರಿ’ ಬ್ಲಾಗ್ ಮತ್ತು ವೆಬ್‍ಸೈಟ್‍ಗಳಲ್ಲಿ ಪ್ರಕಟಗೊಂಡ ...
READ MORE