ತ.ರಾ.ಸು ಅವರ ಸಾಮಾಜಿಕ ಕಾದಂಬರಿ ಚಕ್ರತೀರ್ಥ. ಈ ಕಾದಂಬರಿಯು ಚಲನಚಿತ್ರವಾಗಿದೆ. 1956ರಲ್ಲಿ ಮೊದಲ ಮುದ್ರಣ ಕಂಡ ಈ ಕೃತಿ 2014ರಲ್ಲಿ ನಾಲ್ಕನೇ ಮುದ್ರಣ ಕಂಡಿದೆ. ಮನುಷ್ಯನ ಧನದಾಸೆ ತನ್ನವರ ಬದುಕ್ಕನ್ನೇ ಹೇಗೆ ದುರಂತಕ್ಕೀಡು ಮಾಡುವುದು ಎಂಬುದನ್ನು ಸೊಗಸಾಗಿ ಚಿತ್ರಿಸಿದ್ದಾರೆ. ಶ್ರೀನಿವಾಸಯ್ಯ ಕಮಲಮ್ಮರ ಸುಖ ಸಂಸಾರದ ಸೊಬಗು, ಅವರ ಮಗಳಾದ ಲಲಿತೆಯ ಆಗಮನದಿಂದ ದುಪ್ಪಟ್ಟಾದರೂ, ತನ್ನ ತಮ್ಮನಾದ ಚಿದಂಬರನಿಗೇ ಲಲಿತಳನ್ನು ಕೊಟ್ಟು ವಿವಾಹ ಮಾಡಬೇಕೆಂಬ ಆಸೆಯಿಂದ ಸ್ವಲ್ಪ ಸ್ವಲ್ಪವೇ ಕರಗಲಾರಂಭಿಸಿ , ಚಿದಂಬರ ಲಲಿತರ ಎಳೆಯ ಪ್ರೀತಿ ಚಿಗುರುವ ಮುನ್ನವೇ ಕಮಲಮ್ಮರ ತಂದೆಯಾದ ಕಾಶೀಪತಯ್ಯನವರ ಹಣದಾಹದ ಪ್ರವಾಹದಲ್ಲಿ ಕೊಚ್ಚಿಹೋಗಿ ಲಲಿತೆಯ ಸಾವಿನಲ್ಲಿ ಅಂತ್ಯಗೊಳ್ಳುತ್ತದೆ.
ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...
READ MORE