ಚಂಡ ಪ್ರಚಂಡ – ಆಧುನಿಕ ರಾಜಕಾರಣಕ್ಕೆ ಸಂಬಂಧಿಸಿದ ಕೃತಿಯಾಗಿ ’ಚಂಡ ಪ್ರಚಂಡ’ ಹೊರಬಂದಿದೆ. ಈ ಕೃತಿಯಲ್ಲಿ ಸತ್ಯಕಾಮರು ಲಂಚ ತಿನ್ನುವವನ ಚಿತ್ರವನ್ನು ಮಾರ್ಮಿಕವಾಗಿ ಚಿತ್ರಿಸಿದ್ದಾರೆ.
’ಸತ್ಯಕಾಮ’ ಎಂಬುದು ಅನಂತ ಕೃಷ್ಣಾಚಾರ್ಯ ಶಹಾಪುರ ಅವರ ಕಾವ್ಯನಾಮ. ತಮ್ಮ ಕಾದಂಬರಿ ಹಾಗೂ ತಂತ್ರವಿದ್ಯೆ, ಕೃಷಿಯ ಮೂಲಕ ನಾಡಿನ ಮನೆ ಮಾತಾದವರು ’ಸತ್ಯಕಾಮ’. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗಲಗಲಿಯಲ್ಲಿ 1920ರ ಮಾರ್ಚ್ 2ರಂದು ಜನಿಸಿದರು. (ಕೆಲವು ಕಡೆ ಏಪ್ರಿಲ್ 16 ಎಂದು ದಾಖಲಾಗಿದೆ.) ಆರಂಭಿಕ ಶಿಕ್ಷಣವನ್ನು ಗಲಗಲಿಯಲ್ಲಿ ಪಡೆದ ಅವರು ಮುಲ್ಕಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಶಾಲೆಯ ಗೊಡವೆಗೇ ಹೋಗದೆ ಒಂದು ವರ್ಷ ಗಲಗಲಿಯಲ್ಲಿಯೇ ಕಳೆದರು. 1935ರಲ್ಲಿ ಬಾಗಲಕೋಟೆಯ ಸಕ್ರಿ ಹೈಸ್ಕೂಲಿಗೆ ಸೇರಿದರಾದರೂ ಓದು ಮುಂದುವರಿಸಲಿಲ್ಲ. ಭಾರತದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಯುತ್ತಿದ್ದ 1930-31ರಲ್ಲಿ ಬಾಲಕ ಅನಂತ ...
READ MORE