‘ಚಾಂದಬೀ ಸರಕಾರ’ ಕೃತಿಯು ಚಂದ್ರಶೇಖರ ಕಂಬಾರ ಅವರ ಕಾದಂಬರಿ. ಈ ಕಾದಂಬರಿಯು ಸಮಕಾಲೀನತೆಯ ಸವಾಲುಗಳನ್ನು ಬದಲಾಗುವ ಚರಿತ್ರೆಯ ಸಂಕ್ರಮಣ ಸ್ಥಿತಿಯಲ್ಲಿ ಶೋಧಿಸುತ್ತದೆ. ಬಲದೇವ ನಾಯಕನ ವೈಯಕ್ತಿಕ ಬದುಕಿನಲ್ಲಿ ಮತ್ತು ಭೂ ಮಸೂದೆ ಮೂಲಕ ಸಮಾಜದಲ್ಲಿ ಒಳ್ಳೆಯದಾಗುವುದನ್ನು ತಡೆಯಲು ಹಳೆ ಜಮೀನ್ದಾರೀ ಪದ್ಧತಿಯ ಪ್ರತಿನಿಧಿಯಾದ ಅಯ್ಯಾ ಸರಕಾರ ಮತ್ತು ಅವನ ಕೆಟ್ಟ ಕಾರ್ಯಗಳಿಗೆ ಬೆಂಗಾವಲಾಗಿರುವ ಬಡ್ಡಿ ಬಂಗಾರಮ್ಮನಂತಹ ಶಕ್ತಿಗಳು ಒಂದಾದಾಗ, ಊರಿನ ಪ್ರಾಚೀನ ಸಂಪಿಗೆ ಮರ ಮತ್ತು ಅಲ್ಲಿರುವ ಜನರ ನಂಬಿಕೆಯ ಕಾಡಮಾಯಿ ಶಿಷ್ಟ ಶಕ್ತಿಯ ಪರವಾಗಿ ಇದ್ದು, ಕೊನೆಗೂ ಒಳ್ಳೆಯದು ಕೆಡುಕಿನ ವಿರುದ್ಧ ಗೆಲ್ಲುತ್ತದೆ ಎಂದಿದ್ದಾರೆ.
ಕೃತಿಗೆ ಬೆನ್ನುಡಿ ಬರೆದಿರುವ ಎಸ್. ಆರ್. ವಿಜಯಶಂಕರ ಅವರು, ‘ಡಾ. ಚಂದ್ರಶೇಖರ ಕಂಬಾರರು ನಂಬಿಕೆಯಲ್ಲಿ ಆಸ್ತಿಕರು. ಕೊನೆಗೂ ಈ ಲೋಕದಲ್ಲಿ ಕೇಡಿನ, ದುಷ್ಟಶಕ್ತಿಗಳ ವಿರುದ್ಧ ಸಾತ್ವಿಕ ಶಕ್ತಿ ಗೆಲ್ಲುತ್ತದೆ ಎಂಬುದು ಅವರ ಪೂರ್ಣ ವಿಶ್ವಾಸ. ಆದರೆ, ಈ ವಿಶ್ವಾಸ ಆಧುನಿಕ ಬದುಕಿನ ಸಂಕೀರ್ಣ ಅನುಭವ. ಕೆಡುಕಿನ ಅಪರಿಮಿತ ಸಾಧ್ಯತೆಗಳಿಗೆ ಕುರುಡಾಗುವುದಿಲ್ಲ. ಸಾತ್ವಿಕ ಶಕ್ತಿಗಳ ಕೊನೆಯ ವಿಜಯದ ಮೆಟ್ಟಿಲೇರುವ ಮೊದಲು ಅನುಭವಿಸಬೇಕಾದ ಸೋಲುಗಳನ್ನು ಕಡೆಗಣಿಸುವುದಿಲ್ಲ. ಚರಿತ್ರೆ ಮತ್ತು ವರ್ತಮಾನದ ಮೌಲ್ಯಗಳ ಪರಸ್ಪರ ಸಂಘರ್ಷವನ್ನು ನಿರೂಪಿಸಲು ಡಾ. ಕಂಬಾರರು ‘ಚಾಂದಬೀ ಸರಕಾರ’ದ ಕಥೆಯಾಗಿ, ಮುಖ್ಯಮಂತ್ರಿಗಳಾಗಿದ್ದಾಗ ದೇವರಾಜ ಅರಸು ಅವರು ಭೂ ಮಸೂದೆ ಕಾಯಿದೆಯನ್ನು ಜಾರಿಗೆ ತಂದಾಗ ಉಂಟಾದ ಸಾಮಾಜಿಕ ಸ್ಥಿತ್ಯಂತರವನ್ನು ಬಳಸುತ್ತಾರೆ. ಬಲದೇವ ನಾಯಕ ಆ ತನಕ ಬೆಳೆದು ಬಂದ ಜಮೀನ್ದಾರೀ ಪದ್ಧತಿಯ ಕೊನೆಯ ಕೊಂಡಿ, ಪ್ರೇಯಸಿಯಂತೆ ಆತನ ಮನಗೆದ್ದು ಪತ್ನಿಯಾದವಳು ಚಾಂದಬೀ ಎನ್ನುವುದನ್ನು ಇಲ್ಲಿ ವಿವರಿಸುತ್ತಾರೆ.
ಸಾಹಿತ್ಯ, ಸಿನಿಮಾ, ರಂಗಭೂಮಿ, ಸಂಗೀತ, ಜಾನಪದ ವಿದ್ವಾಂಸರಾದ ಚಂದ್ರಶೇಖರ ಕಂಬಾರರು ಜನಿಸಿದ್ದು 1937 ಜನವರಿ 2 ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ. ಅವರ ವಿದ್ಯಾಬ್ಯಾಸ ಗೋಕಾಕ್, ಬೆಳಗಾವಿ ಮತ್ತು ಧಾರವಾಡದಲ್ಲಿ ನಡೆಯಿತು. ಗೋಕಾಕ ಮತ್ತು ಬೆಳಗಾವಿಯ ಬ್ರಿಟಿಷರ ಭಯದ ನೆರಳು ಆವರಿಸಿದ್ದ ಪರಿಸರದಿಂದ ಲೇಖಕನಾಗಿ ಮೈಪಡೆದ ಕಂಬಾರರ ಬಾಲ್ಯದ ಆತಂಕಗಳು ಅವರ ಕೃತಿಗಳಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತವೆ. ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಬಂದು ಎಂ.ಎ ಮತ್ತು ಪಿ.ಎಚ್.ಡಿ ಪದವಿಗಳನ್ನು ಪಡೆದರು. ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ (1968-69), ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (1971-1991) ಅಧ್ಯಾಪಕರಾಗಿ, ಪ್ರವಾಚಕರಾಗಿ ಸೇವೆ ಸಲ್ಲಿಸಿದರು. ಹಂಪಿಯ ...
READ MORE