ಕವಿಯತ್ರಿ ಸವಿತಾ ನಾಗಭೂಷಣ ಅವರ ಕವನ ಸಂಕಲನ-ಚಂದ್ರನನ್ನು ಕರೆಯಿರಿ ಭೂಮಿಗೆ. ಕವಿತೆಗಳ ವಿಷಯ ವಸ್ತು, ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆ, ಕಲ್ಪನಾ ಸೌಂದರ್ಯ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕವಿತೆಗಳು ಓದುಗರ ಗಮನ ಸೆಳೆಯುತ್ತವೆ.
ಚಿಕ್ಕಮಗಳೂರಿನಲ್ಲಿ ಜನಿಸಿದ ಸವಿತಾ ನಾಗಭೂಷಣ ಅವರು ಬೆಳೆದದ್ದು ಮತ್ತು ಶಿಕ್ಷಣ ಪಡೆದದ್ದು ಶಿವಮೊಗ್ಗದಲ್ಲಿ. ಮಲೆನಾಡಿನ ಅನುಭವದ ಹಿನ್ನೆಲೆಯಲ್ಲಿ ಅವರ ಬಹಳಷ್ಟು ಕವಿತೆಗಳಲ್ಲಿ ಗಿಡ-ಮರ, ಹಸಿರು-ಹೂ-ಹಣ್ಣು ಮತ್ತು ಹೊಳೆ-ಮಳೆ- ಮೋಡಗಳ ಜೀವಂತ ರೂಪಕ ಒಳಗೊಂಡಿರುತ್ತವೆ. ವರ್ತಮಾನದ ಮನುಷ್ಯನ ಆಳದ ಸಂತೋಷ-ನೆಮ್ಮದಿ, ದುಃಖ- ವಿಷಾದಗಳನ್ನು ಅಂತಃಕರಣಪೂರ್ವಕವಾಗಿ ದಾಖಲಿಸುತ್ತವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕಾವ್ಯಕ್ಕಾಗಿ ನೀಡುವ ಪ್ರಶಸ್ತಿ ಪಡೆದ ಮೊದಲ ಕವಯತ್ರಿಯಾದ (ನಾ ಬರುತ್ತೇನೆ ಕೇಳು) ಸವಿತಾ ಅವರ ಎಲ್ಲ ಸಂಕಲನಗಳಿಗೆ ವಿವಿಧ ಸಂಘ-ಸಂಸ್ಥೆಗಳ ಬಹುಮಾನ -ಪ್ರಶಸ್ತಿ ಸಂದಿವೆ. ಅವರ ವಿಶಿಷ್ಟ ಕಾದಂಬರಿ ’ಸ್ತ್ರೀಲೋಕ’ಕ್ಕೆ ಎಂ.ಕೆ. ಇಂದಿರಾ ಮತ್ತು ಬಿ.ಎಚ್. ಶ್ರೀಧರ್ ...
READ MORE