ಮರಾಠಿ ಮೂಲದ ಕೃಷ್ಣರಾವ್ ಅರ್ಜುನ್ ಕೇಳೂಸ್ಕರ್ ಅವರು ಛತ್ರಪತಿ ಶಿವಾಜಿ ಕುರಿತು ಬರೆದ ಐತಿಹಾಸಿಕ ಕಾದಂಬರಿಯನ್ನು ಲೇಖಕ ಚಂದ್ರಕಾಂತ ಪೋಕಳೆ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. 1906ರಲ್ಲಿ ಛತ್ರಪತಿ ಶಿವಾಜಿ ಕುರಿತು ಪ್ರಕಟವಾದ ಮೊದಲ ಚರಿತ್ರೆ ಇದಾಗಿದೆ. ಛತ್ರಪತಿ ಶಿವಾಜಿ ಅವರ ಐತಿಹಾಸಿಕವಾಗಿ ಮಹತ್ವದ ನೈಜ ಘಟನೆಗಳನ್ನುಈ ಬರಹದಲ್ಲಿ ಕಾಣಿಸಿದೆ ಎಂಬುದು ಈ ಕೃತಿಯ ವೈಶಿಷ್ಟ್ಯ. ಶಿವಾಜಿಯ ಇತಿಹಾಸವನ್ನು ಈ ಕೃತಿಯ ಮೂಲಕವೂ ನೋಡಲಾಗುತ್ತಿದೆ.
ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...
READ MORE