ಗೀತಾ ವಸಂತ ಅವರ ಸಣ್ಣಕತೆಗಳ ಸಂಕಲನ ವಿದು. ಈ ಸಂಕಲನದಲ್ಲಿ ‘ಚೌಕಟ್ಟಿನಾಚೆಯವರು’, ‘ಮಳೆ ಬಂತೋ ಮಾರಾಯ...’, ‘ಚಿಕ್ಕ ಚಿಕ್ಕ ನವಿಲೇ’, ‘ಹಸಿರು ರೇಷ್ಮೆ ಸೀರೆ’, ‘ಒಂದು ಅರಳೀ ಎಲೆ ಸಾಕು’, ‘ಇದು ಬರಿ ಬೆಳಗಲ್ಲೋ ಅಣ್ಣಾ’ , ‘ಬೇಟೆ’, ಉರಿಯ ವಾಸನೆ’ ಮತ್ತು ‘ಕಾಗದದ ನೋಟು’ ಎಂಬ ಕತೆಗಳಿವೆ. ಈ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಸಂದಿದೆ.
ಗೀತಾ ವಸಂತ- ಕವಯತ್ರಿ, ಕಥೆಗಾರ್ತಿ ಮತ್ತು ವಿಮರ್ಶಕಿ. ಗೀತಾ ಅವರು ಹುಟ್ಟಿದ್ದು ಶಿರಸಿಯ ಎಕ್ಕಂಬಿ ಸಮೀಪದ ಕಾಡನಡುವಿನ ಒಂಟಿಮನೆ ಕಾಟೀಮನೆಯಲ್ಲಿ 1976 ಏಪ್ರಿಲ್ 20 ರಂದು . ಈಗ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸಿರುವ ಅವರು ಡಿವಿಜಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಚೌಕಟ್ಟಿನಾಚೆಯವರು’ ಇವರ ಪ್ರಮುಖ ಕಥಾ ಸಂಕಲನ. ’ಹೊಸಿಲಾಚೆ ಹೊಸ ಬದುಕು , ಪರಿಮಳದ ಬೀಜ’ ಗೀತಾ ವಸಂತ ಅವರ ಕವನಸಂಕಲನಗಳು. ಬೆಳಕಿನ ಬೀಜ, ಬೇಂದ್ರೆ ಕಾವ್ಯ - ಅವಧೂತ ಪ್ರಜ್ಞೆ, ಹೊಸ ದಿಗಂತದ ಹೊಸದಾರಿ ಇವರ ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ-2011
ಪಾಟೀಲ ಪುಟ್ಟಪ್ಪ ಕಥಾ ಪ್ರಶಸ್ತಿ-2009