‘ಡಾ.ಎಸ್. ರಾಧಾಕೃಷ್ಣನ್ ’ ಮಹಾಬಲೇಶ್ವರ ರಾವ್ ಅವರು ರಚಿಸಿರುವ ಜೀವನ ಚರಿತ್ರೆ. ವಸಂತ ಪ್ರಕಾಶನ ಪ್ರಕಟಿಸುತ್ತಿರುವ ಈ ವಿಖ್ಯಾತರ ವ್ಯಕ್ತಿಚಿತ್ರ ಮಾಲೆಯಲ್ಲಿ ಧರ್ಮ, ತತ್ವಶಾಸ್ತ್ರ, ಚರಿತ್ರೆ, ವಿಜ್ಞಾನ, ಅರ್ಥಶಾಸ್ತ್ರ, ಪರಿಸರ, ಉದ್ಯಮ ರಾಜಕೀಯ, ಸಮಾಜ ಸುಧಾರಣೆ, ಸಾಹಿತ್ಯ, ಸಂಗೀತ, ಲಲಿತ ಕಲೆ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನೂ ಅದ್ವಿತೀಯ ಸಾಧನೆಗಳನ್ನೂ ಮಾಡಿದ ಮೇಧಾವಿಗಳ ಜೀವಚಿತ್ರಣಗಳಿವೆ. ಈ ಕೃತಿಯಲ್ಲಿ ತತ್ತ್ವಶಾಸ್ತ್ರದ ಮಡಿಲಲ್ಲಿ, ಉಪಕುಲಪತಿಗಳ ಪೀಠದಲ್ಲಿ, ರಾಯಭಾರದ ಲೋಕ, ರಾಷ್ಟ್ರ ಗೌರವದ ಹುದ್ದೆಗಳಲ್ಲಿ, ಪೂರ್ವ ಪಶ್ಚಿಮದ ಸ್ವರ್ಣಸೇತು, ಬಾಳುವೆಯ ಬಹುಮಜಲುಗಳು, ಉವಾಚ ಹಾಗೂ ನಡೆದು ಬಂದ ದಾರಿ ಎಂಬ ಶೀರ್ಷಿಕೆಯಡಿಯಲ್ಲಿ ಡಾ.ಎಸ್. ರಾಧಾಕೃಷ್ಣನ್ ಅವರ ಜೀವನ ಚಿತ್ರಣವನ್ನು ದಾಖಲಿಸಿದ್ದಾರೆ.
ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ. ...
READ MORE