'ದಲಿತ ಚಳವಳಿ ಕಥನ' ಲೇಖಕ ಎಚ್.ಟಿ. ಪೋತೆ ಅವರ ಕೃತಿ. ದಲಿತ ಚಳವಳಿ ಮತ್ತು ಅದರ ರೂವಾರಿಗಳಿಗೆ ಗೌರವ ಅರ್ಪಿಸುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಎಪ್ಪತ್ತರ ದಶಕ ಮತ್ತು ಆ ಪೂರ್ವದ ಅನೇಕ ಸ್ವಾಭಿಮಾನಿಗಳು ತಾವು ಬದುಕುವುದರ ಜೊತೆಗೆ ಉಳಿದವರನ್ನು ಬದುಕಿಸುವ ಕೈಂಕರ್ಯದಲ್ಲಿ ಇತರರಿಗೆ ಮಾದರಿಯ ದಾರಿದೀಪವಾದವರು. ಮೇಣದಂತೆ ತಮ್ಮನ್ನು ತಾವು ಸುಟ್ಟುಕೊಂಡು ಅನೇಕ ಅನಾಮಧೇಯರನ್ನೂ ಪರಿಚಯಿಸಲು ಉದ್ದೇಶಿಸಿದ್ದೇ ಈ ಕೃತಿ.
ಕಥೆಗಾರ, ವಿಮರ್ಶಕ, ಅನುವಾದಕ, ಚಿಂತಕ, ಜಾನಪದ ವಿದ್ವಾಂಸ ಹಾಗೂ ಸಂಶೋಧಕರಾದ ಪ್ರೊ. ಎಚ್.ಟಿ.ಪೋತೆ ಬಿಸಿಲನಾಡಿನ ದಿಟ್ಟಪ್ರತಿಭೆ. ಬುದ್ದ. ಬಸವ, ಅಂಬೇಡ್ಕರ್, ಫುಲೆ, ಪೆರಿಯಾರ್, ಬಿ. ಶ್ಯಾಮಸುಂದರ್ ಚಿಂತನೆಗಳ ನೆಲೆಯಲ್ಲಿ ಸಾಹಿತ್ಯ ಕೃಷಿಗೈದವರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಂಜಗಿ ಪೋತೆಯವರ ಜನ್ಮಸ್ಥಳ, ಗುಲ್ಬರ್ಗಾ ವಿವಿಯಿಂದ ಎಂ.ಎ, ಎಂ.ಫಿಲ್, ಪಿಎಚ್ಡಿ. ಅಂಬೇಡ್ಕರ್ ಕುರಿತಾದ ಕನ್ನಡದ ಮೊದಲ ಡಿ.ಲಿಟ್ ಪಡೆದ ಹೆಗ್ಗಳಿಕೆ. ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕ, ಪ್ರಸಾರಂಗದ ನಿರ್ದೇಶಕ, ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ, ಕರ್ನಾಟಕ ವಿವಿ ಮೌಲ್ಯಮಾಪನ ಕುಲಸಚಿವರಾಗಿ ಅವರದ್ದು ಬಹುರೂಪಿ ಶೈಕ್ಷಣಿಕ ...
READ MORE