ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ದಲಿತ ಚಳವಳಿ ಮತ್ತು ಇತರ ಲೇಖನಗಳು.ದಲಿತ ಚಳವಳಿಯ ಒಟ್ಟಾರೆ ಪರಿಣಾಮಗಳ ಅವಲೋಕನವಿದು. ನಾಡಿನ ವಿವಿಧೆಡೆಯಿಂದ ಬಂದ ಲೇಖನಗಳನ್ನು ಒಳಗೊಂಡಿದೆ. ಕೃತಿಗೆ ಬೆನ್ನುಡಿ ಬರೆದ ಮುಳ್ಳೂರು ನಾಗರಾಜ ‘ದಲಿತ ಸಂಘಟನೆಯ ಹಾಸು-ಬೀಸುಗಳನ್ನು ಮೂಲದಿಂದಲೇ ವಿವರಿಸುವ ಈ ಕೃತಿ ತನ್ನದೇ ಆದ ರೀತಿಯಲ್ಲಿ ಉದ್ವಿಗ್ನತೆಯನ್ನು , ನಿರ್ಲಿಪ್ತ ವಿವೇಕವನ್ನು ತನ್ನೊಳಗೆ ಅಂತರ್ಗತವಾಗಿಸಿಕೊಂಡಿದೆ. ಒಂದು ಮಾನವೀಯ ಸಂಘಟನೆಯು ಏಕತೆಯಿಂದ ಅನೇಕತೆಯ ಕಡೆಗೆ ಚಲಿಸಿದ್ದು ಹೇಗೆ ಮತ್ತು ಏಕೆ ಎಂಬುದಕ್ಕೆ ಇಲ್ಲಿ ಉತ್ತರ ಸಿಕ್ಕಿದೆ’ ಎಂದು ಪ್ರಶಂಸಿಸಿದ್ದಾರೆ.
ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...
READ MORE