ದಲಿತ ಸಾಹಿತ್ಯ ಸಂಪುಟ-ಕಾವ್ಯ

Author : ಮೂಡ್ನಾಕೂಡು ಚಿನ್ನಸ್ವಾಮಿ

Pages 198

₹ 300.00




Year of Publication: 2019
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು - 560018

Synopsys

‘ದಲಿತ ಸಾಹಿತ್ಯ ಸಂಪುಟ’ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಸಂಪಾದಿಸಿದ ಹೊಸ ತಲೆಮಾರಿನ ಕವಿಗಳ ಕವನ ಸಂಕಲನ. ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪ್ರಕಟವಾದ ಈ ಕೃತಿ, ದಲಿತ ಸಾಹಿತ್ಯ ಸಂಪುಟಗಳು ಎಂಬ ಮಹತ್ವದ ಯೋಜನೆಯಲ್ಲಿ ಪ್ರಕಟಗೊಂಡಿದೆ.

ಆಧುನಿಕ ಕನ್ನಡ ಸಾಹಿತ್ಯದಲ್ಲಿ ನವೋದಯ, ನವ್ಯ ಘಟ್ಟಗಳ ಹಾಗೆಯೇ 1970-80ರ ದಶಕದಲ್ಲಿ ಆರಂಭವಾದ ಬಂಡಾಯ ಹಾಗೂ ದಲಿತ ಪಂಥಗಳೂ ಅತ್ಯಂತ ಪ್ರಮುಖ ಘಟ್ಟಗಳು, ಬಂಡಾಯ ಹಾಗೂ ದಲಿತ ಪಂಥಗಳ ಕಾಲದಲ್ಲಿ ಕನ್ನಡದಲ್ಲಿ ಅನೇಕ ಮಹತ್ವದ ಕೃತಿಗಳು ಪ್ರಕಟವಾಗಿವೆ. ಆದರೆ, ಪ್ರಾತಿನಿಧಿಕ ದಲಿತ ಬರವಣಿಗೆಗಳನ್ನು ಒಳಗೊಂಡ ಸಂಪುಟಗಳು ಇದುವರೆಗೆ ಬಂದಿರಲಿಲ್ಲ. ಸದ್ಯ ಕನ್ನಡ ಸಾಹಿತ್ಯ ಅಕಾಡೆಮಿ ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಿದೆ.

About the Author

ಮೂಡ್ನಾಕೂಡು ಚಿನ್ನಸ್ವಾಮಿ
(22 September 1954)

ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸತ್ವಪೂರ್ಣ ದನಿಯಾಗಿರುವ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮೂಲತಃ ಗಡಿನಾಡಾದ ಚಾಮರಾಜನಗರದವರು. ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾದ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರಲ್ಲದೆ, ನಿರ್ದೇಶಕರು(ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿ ಮಾರ್ಚ್ 2012ರಲ್ಲಿ ನಿವೃತ್ತಿ ಹೊಂದಿದ್ದಾರೆ. ಜೊತೆಗೆ ಏಪ್ರಿಲ್ 2015 ರಿಂದ ಮಾರ್ಚ್ 2017 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2016-17 ರ ಸಾಲಿಗೆ ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ...

READ MORE

Related Books