ದಿನಕರ ದೇಸಾಯಿ ರವರು ಕನ್ನಡ ಸಾಹಿತ್ಯ ಲೋಕದಲ್ಲಿ ಚುಟುಕುಗಳ ಬ್ರಹ್ಮ ಎಂದೇ ಪ್ರಸಿದ್ಧಿಯಾದವರು. ಇವರು ಸಮಾಜ ಸೇವೆಗಾಗಿ ಆಯ್ದುಕೊಂಡ ಕ್ಷೇತ್ರಗಳು ಹಲವಾರು. ನವೋದಯ ಕಾಲಘಟ್ಟದ ಹೋರಾಟಗಾರನಾಗಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯೆಯ ಪ್ರಸರಣಕ್ಕಾಗಿ ವಿದ್ಯಾ ಸಂಸ್ಥೆಗಳ ಸ್ಥಾಪಕನಾಗಿ, ಜಿಲ್ಲೆಯ ರೈತರನ್ನು ಒಗ್ಗೂಡಿಸಿ ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ಪ್ರಮುಖ ರೈತ ನಾಯಕನಾಗಿ ಗುರುತಿಸಿಕೊಂಡವರು. ಹಲವು ಚುಟುಕು ಕವಿಗಳ ಮೇಲೆ ಗಾಢ ಪ್ರಭಾವ ಬೀರಿರುವ ಇವರ ಭಾವಗೀತೆ, ಕಥನಕವನ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲೂ ಚಾಪು ಮೂಡಿಸಿದೆ. ವಿಷ್ಣುನಾಯ್ಕರವರು ದಿನಕರ ದೇಸಾಯಿಯವರ ಆಯ್ದ ಕವಿತೆಗಳನ್ನು ಸಂಗ್ರಹಿಸಿ ಈ ಕೃತಿಯಲ್ಲಿ ಕೊಟ್ಟಿದ್ದಾರೆ.
ವಿಷ್ಣು ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಅಂಬಾರಕೊಡ್ಲದಲ್ಲಿ 1944 ಜುಲೈ 1ರಂದು ಜನಿಸಿದರು. ತಾಯಿ ಬುದವಂತಿ, ತಂದೆ ನಾಗಪ್ಪ. ಅಂಬಾರಕೊಡ್ಲ ಹಾಗೂ ಅಂಕೋಲಾದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಜಾನಪದ ಸಾಹಿತ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ಕೃಷಿ ಸಾಧಿಸಿದ್ದಾರೆ. ರಾಘವೇಂದ್ರ ಪ್ರಕಾಶನದ ಮಾಲೀಕರು ಆಗಿದ್ದ ಇವರು ಬರೆದ ಪ್ರಮುಖ ಕೃತಿಗಳೆಂದರೆ ಸುಮನ, ಆ ರೀತಿ ಈ ರೀತಿ, ನನ್ನ ಅಂಬಾರಕೊಡಲು, ವಾಸ್ತವ, ಹೊಸಭತ್ತ ಮುಚ್ಚಿದ ಬಾಗಿಲು ಮತ್ತು ಮರಿಗುಬ್ಬಿ, ನೋವು ...
READ MORE