ಅಶೋಕ ಪೈ ಅವರು ಮನೋವಿಜ್ಞಾನಿ, ಮನೋವೈದ್ಯ, ಲೇಖಕ, ಸಮಾಜಸೇವಕ ಹಾಗೂ ಚಲನಚಿತ್ರ ಸಾಹಿತಿ, ನಿರ್ಮಾಪಕರಾಗಿ ಗುರುತಿಸಿಕೊಂಡವರು. ಇವರು ನಿರ್ಮಿಸಿದ ’ಕಾಡಿನ ಬೆಂಕಿ’ ಮನೋ ಲೈಂಗಿಕ ಸಮಸ್ಯೆಯನ್ನು ಕುರಿತ ಚಿತ್ರಕ್ಕೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಲಭಿಸಿದೆ (1988-89). ಮಕ್ಕಳ ಮಾನಸಿಕ ಸಮಸ್ಯೆ ಕುರಿತಂತೆ ರಚಿಸಿದ ’ಉಷಾಕಿರಣ’ ರಾಜ್ಯ ಪ್ರಶಸ್ತಿಯನ್ನೂ, ಪ್ರತಿಷ್ಟಿತ ’ಫಿಲ್ಮ್‌ಫೇರ್’ ಪ್ರಶಸ್ತಿಯನ್ನೂ ಗಳಿಸಿದೆ. ಈ ಚಿತ್ರ ಲಂಡನ್ ಮತ್ತು ಅಮೆರಿಕದಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವದಲ್ಲೂ ಪ್ರದರ್ಶನಗೊಂಡಿದೆ. ವೈದ್ಯಕೀಯ ರಂಗದಲ್ಲಿ ಸಾಧನೆ ಮಾಡಿದ ಇವರಿಗೆ ಬೀchi ಪ್ರಶಸ್ತಿ (1988), ವಿಶ್ವೇಶ್ವರಯ್ಯ ನವರತ್ನ ಪ್ರಶಸ್ತಿ ಹಾಗೂ ಸಂದೇಶ ಮಾಧ್ಯಮ ಪ್ರಶಸ್ತಿ (1994), ಆರ್ಯಭಟ ಪ್ರಶಸ್ತಿ (1995-97-98) ಹಲವು ಪ್ರಶಸ್ತಿಗಳು ಲಭಿಸಿವೆ. ಇವರ ಬಣ್ಣದ ಬದುಕನ್ನು ಲೇಖಕರು ಇಲ್ಲಿ ಚಿತ್ರಿಸಿದ್ದಾರೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE