‘ಡಾ.ಎಸ್. ರಾಧಾಕೃಷ್ಣನ್ ’ ಪತ್ರಕರ್ತ, ಲೇಖಕ ಜಿ.ಕೆ. ಮಧ್ಯಸ್ಥ ಅವರು ರಚಿಸಿರುವ ಡಾ.ಎಸ್. ರಾಧಾಕೃಷ್ಣನ್ ಅವರ ಜೀವನಚರಿತ್ರೆ. ವಸಂತ ಪ್ರಕಾಶನ ವಿದ್ಯಾರ್ಥಿಗಳಿಗಾಗಿ ಹೊರತಂದ ಮಹಾನ್ ವ್ಯಕ್ತಿಗಳ ಸಂಕಲ್ಪ-ಸಾಧನೆ ಮಾಲೆಯಲ್ಲಿ ಪ್ರಕಟವಾದ ಈ ಕೃತಿಯಲ್ಲಿ ಮಹಾನ್ ಬೋಧಕ, ತತ್ವಜ್ಞಾನಿ ಹಾಗೂ ಬರಹಗಾರ ಡಾ.ಎಸ್. ರಾಧಾಕೃಷ್ಣನ್ ಅವರ ಬದುಕು ಬರಹಗಳ ಕುರಿತಾದ ಮಹತ್ವದ ಮಾಹಿತಿಗಳಿವೆ.
ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...
READ MORE