ದ್ವೀಪವ ಬಯಸಿ ಎಂಬುದು ಲೇಖಕ ಎಂ.ಆರ್. ದತ್ತಾತ್ರಿ ಅವರು ಬರೆದ ಕಾದಂಬರಿ. ಸೂರ್ಯನಾರಾಯಣ ಚಡಗ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಪಡೆದ ಕೃತಿ ಇದು. ಸಂಬಂಧಗಳ ಗಾಢತೆಯನ್ನು ಒಳಗೊಂಡ ಭಾರತದಿಂದ ಅಮೆರಿಕಕ್ಕೆ ಹೋದ ವ್ಯಕ್ತಿಯೊಬ್ಬ ಅಲ್ಲಿ ಸಂಬಂಧಗಳನ್ನು ಹುಡುಕ ಹೋಗುತ್ತಾನೆ. ಆದರೆ, ಅವನಿಗೆ ನಿರಾಶೆ ಕಾದಿರುತ್ತದೆ. ಆಧುನಿಕ ಜೀವನ ಶೈಲಿ, ಸಂಬಂಧಗಳಿಗೆ ಬೆಲೆ ಇಲ್ಲದ ಸಮಾಜ, ಈ ಮಧ್ಯೆ ದ್ವಂದ್ವದಲ್ಲಿ ಸಿಲುಕುವ ಪಾತ್ರದ ಗೊಂದಲಗಳು ಈ ಕಾದಂಬರಿಯ ವಸ್ತು. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿದ್ದ ಈ ವ್ಯಕ್ತಿ ಅಮೆರಿಕದಲ್ಲಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ನ ಕಥೆ ಇದು.
ಕಾದಂಬರಿಕಾರ, ಕವಿ, ಅಂಕಣಕಾರ, ಮತ್ತು ಅನುವಾದಕರಾಗಿ ಎಂ ಆರ್ ದತ್ತಾತ್ರಿ ಯವರು ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮೂಲದ ಊರು ಚಿಕ್ಕಮಗಳೂರು. ಮೈಸೂರು ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ನಲ್ಲಿ ಇಂಜಿನಿಯ ರಿಂಗ್ ಪದವಿ ಪಡೆದು ಕೆಜಿಎಫ್, ಪುಣೆ, ಸ್ಯಾನ್ ಫ್ರಾನ್ಸಿಸ್ಕೋ ಮತ್ತು ಲಾಸ್ ಏಂಜಲಿಸ್ ನಗರಗಳಲ್ಲಿ ವೃತ್ತಿ ಜೀವನ ನಡೆಸಿ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅನೇಕ ಸಾಧನೆಗಳ ಕೀರ್ತಿ ದತ್ತಾತ್ರಿಯವರದ್ದಾಗಿದೆ. ಇಆರ್ಪಿ ಕ್ಲೌಡ್ ಟೆಕ್ನಾಲಜಿ ಕ್ಷೇತ್ರದಲ್ಲಿ ಸಂಪನ್ಮೂಲವ್ಯಕ್ತಿಯಾಗಿ ಅನೇಕ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಕೆಲಸ ಮಾಡಿದ ಅನುಭವವು ಅವರದ್ದು. ಅಮೆರಿಕ ಮತ್ತು ಭಾರತದ ಅನೇಕ ...
READ MORE