‘ಇಬ್ಬರು ಗೆಳೆಯರು’ ಭಾರತ ಸಾಸಣೆ ಅವರು ಬರೆದ ಮರಾಠಿ ಕಾದಂಬರಿಯನ್ನು ಡಾ. ಚಂದ್ರಕಾಂತ ಪೋಕಳೆ ಕನ್ನಡೀಕರಿಸಿದ್ದಾರೆ. ಬದುಕು, ಬಡತನ ಬವಣೆಗಳ ನಡುವೆ ಧರ್ಮಗಳು ಹೇಗೆ ಮನುಷ್ಯನ ಬದುಕಿನ ಮೇಲೆ ಪರಿಣಾಮ ಬೀರುತ್ತವೆ ಎಂಬುದನ್ನು ಈ ಕಾದಂಬರಿಯಲ್ಲಿ ಸರಳವಾಗಿ ವಿವರಿಸಿದ್ದಾರೆ.
ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...
READ MORE