ಹೈದರಾಬಾದಿನ ನಿಜಾಮರ ಐತಿಹಾಸಿಕ ಹಿನ್ನೆಲೆಯಲ್ಲಿ ರಚಿಸಿರುವ ಈ ಕಾದಂಬರಿಯ ನಿಧಿಯನ್ನು ಅನ್ವೇಷಿಸುವ ಮಾರ್ಗದಲ್ಲಿ ರೋಚಕತೆ ಹುಟ್ಟಿಸುತ್ತದೆ. ನಿಜಾಮ್ರ ನೈಜ ಕಥೆಯನ್ನು ಹೈದರಾಬಾದ್ ಗಲ್ಲಿ ಗಲ್ಲಿ ಸುತ್ತಿ, ಘಟನೆಗಳನ್ನು ಕೂಡಿಹಾಕಿ ಮತ್ತು ಭಾರತದಲ್ಲಿ ನಿಷೇಧಿತ ಪುಸ್ತಕದ ಜೆರಾಕ್ಸ್ ಪ್ರತಿ ಅಧ್ಯಯನ ಮಾಡಿ ಕೆ.ಎನ್. ಗಣೇಶಯ್ಯ ಅವರು ಈ ರೋಚಕ ಕಾದಂಬರಿ ರಚಿಸಿದ್ಧಾರೆ.
ವೃತ್ತಿಯಿಂದ ಕೃಷಿ ವಿಜ್ಞಾನಿ ಆಗಿರುವ ಕೆ.ಎನ್. ಗಣೇಶಯ್ಯ ಅವರು ಮೂಲತಃ ಕೋಲಾರ ಜಿಲ್ಲೆಯವರು. ಕಳೆದ ೩೦ ವರ್ಷಗಳಿಂದ ತಳಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಅವರು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು. ಪ್ರಾಣಿ ಮತ್ತು ಸಸ್ಯಗಳ ವರ್ತನೆಗೆ ಮೂಲಭೂತವಾದ ಜೀವವಿಕಾಸದ ತತ್ವಗಳನ್ನು ಅನ್ವೇಷಿಸುವುದು ಇವರ ಮತ್ತೊಂದು ಸಂಶೋಧನಾಸಕ್ತಿ. ಭಾರತದ ಪ್ರಮುಖ ಜೀವ ವೈವಿಧ್ಯ ತಾಣಗಳಲ್ಲಿನ ಸಸ್ಯಗಳ ಮತ್ತು ದೇಶದ ಜೀವ ಸಂಪತ್ತಿನ ಬಗ್ಗೆ ಇವರು ತಯಾರಿಸಿರುವ ಮಾಹಿತಿಯ ಖಜಾನೆಯ ಸಿ.ಡಿ.ಗಳು ಮತ್ತು ಅಂತರ್ಜಾಲ ಒಂದು ಅಪೂರ್ವ ಹೆಜ್ಜೆ. ಇನ್ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧ ಬರೆದಿರುವ ಅವರು ಆರು ವೈಜ್ಞಾನಿಕ ಕೃತಿಗಳನ್ನು ...
READ MORE