ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ, ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಗೀತಾ ನಾಗಭೂಷಣ್. ಈ ಕೃತಿಯಲ್ಲಿ ಸಾಮಾಜಿಕವಾಗಿ ಉನ್ನತ ಅಂತಸ್ತಿನಲ್ಲಿರುv ಜನರ ಜೀವನ ಶೈಲಿ, ತಿಂದು ತೇಗುವ ಅವರ ಸಂಸ್ಕೃತಿ, ಜೀವನದಲ್ಲಿ ಸಂಭವಿಸುವ ಆಕಸ್ಮಿಕ ಅನಾಹುತಗಳಿಂದಾಗಿ ಅವರ ಬದುಕಿನಲ್ಲಾಗುವ ಬದಲಾವಣಿಗಳನ್ನುʼಏರಿಳಿತʼ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ. ಕಾದಂಬರಿಯ ಘಟನೆ-ಸನ್ನಿವೇಶಗಳ ಹೆಣಿಕೆ, ಕಥೆಯ ನಿರೂಪಣೆ, ಶೈಲಿ ಇತರೆ ಅಂಶಗಳಿಂದ ಓದುಗರನ್ನು ಸೆಳೆಯುತ್ತದೆ.
ಕನ್ನಡದ ಲೇಖಕಿಯರಲ್ಲಿ ಒಬ್ಬರಾದ ಗೀತಾ ನಾಗಭೂಷಣ ಅವರು ತಮ್ಮ ಕಾದಂಬರಿ-ಕತೆಗಳ ಮೂಲಕ ಜನಪ್ರಿಯರಾದವರು. ಗುಲ್ಬರ್ಗದ ಬಡ ಕುಟುಂಬದಲ್ಲಿ 1942ರ ಮಾರ್ಚ್ 25ರಂದು ಜನಿಸಿದರು. ತಂದೆ ಶಾಂತಪ್ಪ-ತಾಯಿ ಶರಣಮ್ಮ. ಮೆಟ್ರಿಕ್ ಮುಗಿಸಿದ ಮೇಲೆ ಕೆಲವುಕಾಲ ಕಲೆಕ್ಟರ್ ಕಛೇರಿಯಲ್ಲಿ ಉದ್ಯೋಗ ಮಾಡಿ ಬೆಳಗಿನ ಶಾಲೆಯಲ್ಲಿ ಓದಿ ಪದವಿ ಪಡೆದು, ಸಂಜೆ ಕಾಲೇಜಿನಲ್ಲಿ ಓದಿ ಬಿಎಡ್ ಮತ್ತು ಎಂ.ಎ. ಪದವಿ ಗಳಿಸಿದರು. ಓದುವಾಗಲೇ ಉದ್ಯೋಗ ಮಾಡುತ್ತಿದ್ದ ಇವರು ಎಂ.ಎ. ಪದವಿ ಗಳಿಸಿದ ನಂತರ ಶ್ರೀ ನಗರೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಧ್ಯಾಪಕಿಯಾಗಿ, ಪ್ರಾಚಾರ್ಯೆಯಾಗಿ 30ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದರು. ...
READ MORE