ದುಶ್ಚಟಗಳಿಗೆ ಬಲಿಯಾದ ಸುಂದರಮೂರ್ತಿ ಎಂಬ ವ್ಯಕ್ತಿಯ ಸುತ್ತಲೂ ಹೆಣೆದುಕೊಂಡ ಕತೆ 'ಎಲ್ಲಿರುವೆ ತಂದೆ ಬಾರೋ'. ನಿರೂಪಣಾ ತಂತ್ರ ಮತ್ತು ಭಾಷೆಯ ಬಳಕೆಯ ಕಾರಣಕ್ಕೆ ಗಮನ ಸೆಳೆಯುವ ಕಾದಂಬರಿ ಇದು. ಭಿಕ್ಷುಕರ ಬದುಕನ್ನು ಮನೋಜ್ಞವಾಗಿ ಇಲ್ಲಿ ಚಿತ್ರಿಸಲಾಗಿದೆ.
'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...
READ MORE