ಹಿರಿಯ ಕವಿ-ಲೇಖಕಿ ಮಾಲತಿ ಪಟ್ಟಣಶೆಟ್ಟಿ ಅವರ ಸಣ್ಣಕತೆಗಳ ಸಂಕಲನ ’ಎಲ್ಯಾದರೂ ಬದುಕಿರು ಗೆಳೆಯಾ’. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಮಾಲತಿ ಪಟ್ಟಣಶೆಟ್ಟಿ ಅವರು ಕವಿತೆ-ಕತೆಗಳ ಮೂಲಕ ಸಾಹಿತ್ಯಲೋಕದಲ್ಲಿ ಪರಿಚಿತರು. ಅವರ ಸಣ್ಣಕತೆಗಳ ಸಂಕಲನವಿದು.
ಕೊಲ್ಲಾಪುರದಲ್ಲಿ ಜನಿಸಿದ ಮಾಲತಿ ಪಟ್ಟಣಶೆಟ್ಟಿ ಅವರ ತಾಯಿ ಶಿವಗಂಗೆ. ಮೂರೇ ವರ್ಷದಲ್ಲಿ ತಾಯಿಲ್ಲದ ತಬ್ಬಲಿಯಾದರು. ತಂದೆ ಶಾಂತೇಶ ಕೋಟೂರ. ಧಾರವಾಡದ ಹೆಣ್ಣುಮಕ್ಕಳ ತರಬೇತಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದರು. ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ. ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ.) ಪಡೆದರು. ಬೆಳಗಾವಿಯ ರಾಣಿ ಪಾರ್ವತಿದೇವಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ವೃತ್ತಿ ಜೀವನ ಆರಂಭಿಸಿದ ಅವರು ಧಾರವಾಡದ ಜೆ.ಎಸ್.ಎಸ್. ಕಾಲೇಜು ಸೇರಿದರು. ಅಲ್ಲಿಯೇ ವಿಭಾಗದ ಮುಖ್ಯಸ್ಥರಾಗಿ 1998ರಲ್ಲಿ ನಿವೃತ್ತರಾದರು. ಅಂತರಂಗ ನಾಟಕ ತಂಡದ ಜೊತೆಗೆ ಗುರುತಿಸಿಕೊಂಡಿದ್ದ ಅವರು ನಾಟಕಗಳಲ್ಲಿ ಸ್ತ್ರೀ ಪಾತ್ರಗಳಲ್ಲಿ ನಟಿಸುತ್ತಿದ್ದರು. ಬಾ ...
READ MORE