ಇಂಗ್ಲಿಶ್ ಪದಗಳಿಗೆ ಸಮನಾದ ಕನ್ನಡದ್ದೇ ಆದ ಪದಗಳನ್ನು ತಿಳಿಯಬಯಸುವವರಿಗೆ ಈ ಕೃತಿ ಸಹಕಾರಿಯಾಗಿದೆ. ಸಾಮಾನ್ಯವಾಗಿ ಇಂಗ್ಲಿಷ್-ಕನ್ನಡ ಪದಕೋಶಗಳಲ್ಲಿ ಇಂಗ್ಲಿಷ್ ಪದಗಳಿಗೆ ಬದಲಾಗಿ ಕನ್ನಡದವೇ ಆದ ಪದಗಳಿಗಿಂತಲೂ ಸಂಸ್ಕೃತದಿಂದ ಎರವಲಾಗಿ ಪಡೆದ ತತ್ಸಮ ಪದಗಳನ್ನು ಕೊಡುವುದೇ ಜಾಸ್ತಿ. ಹಾಗಾಗಿ ಕನ್ನಡವೇ ಆದ ಪದಗಳಿದ್ದರೂ ಅವು ಅಂತಹ ಪದಕೋಶಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆ. ಹಾಗಾಗಿ ಕನ್ನಡ ಪದಗಳನ್ನು ಕೊಟ್ಟಿರುವ ಕೃತಿ ಇದಾಗಿದೆ.
©2024 Book Brahma Private Limited.