ಹಿರಿಯ ಲೇಖಕ-ವಿಮರ್ಶಕ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರು ರಚಿಸಿದ ಕೃತಿ-ಇಂಗ್ಲಿಷ್ ಸಾಹಿತ್ಯ ಚರಿತ್ರೆ. ಇಂಗ್ಲಿಷ್ ಸಾಹಿತ್ಯದ ಅರುಣೋದಯದಿಂದ ಇಪ್ಪತ್ತನೆಯ ಶತಮಾನದ ಕಡೆಯವರೆಗಿನ ಚರಿತ್ರೆಯನ್ನು ಲೇಖಕರು ತಮ್ಮ ವಿಶ್ಲೇಷಣೆಗೆ ಒಳಪಡಿಸಿದ್ದಾರೆ. ಪ್ರತಿ ಯುಗದ ಸಾಹಿತ್ಯದ ಆರ್ಥಿಕ, ಸಾಮಾಜಿಕ, ರಾಜಕೀಯ ಹಿನ್ನೆಲೆ, ಪ್ರತಿ ಸಾಹಿತ್ಯ ಪ್ರಕಾರದ ವಿಕಸನ, ಪ್ರಮುಖ ಸಾಹಿತಿಗಳ ಸಾಧನೆಯ ವಿಮರ್ಶಾತ್ಮಕ ವಿಶ್ಲೇಷಣೆ ಎಲ್ಲವನ್ನೂ ಒಳಗೊಂಡಿದೆ. ಕನ್ನಡ ಸಾಹಿತ್ಯಕ್ಕೆ ಈ ಕೃತಿಯು ವಿಶಿಷ್ಟ ಕೊಡುಗೆ. 2001ರಲ್ಲಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿಯೂ ಹೌದು.
ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...
READ MORE