`ಫೀಲ್ಡ್ ಮಾರ್ಷಲ್ ಮಾಣಿಕ್ ಷಾ' ಅವರ ಜೀವನಚರಿತ್ರೆಯ ಪುಸ್ತಕವಿದು. ಲೇಖಕ ನಾ. ಡಿಸೋಜ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಭಾರತ ಸೇನೆಯ ಮಹಾನ್ ದಂಡನಾಯಕರಾಗಿ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣಿಕ್ ಶಾ ಅವರ ಕಾರ್ಯವೈಖರಿ, ಬಾಂಗ್ಲಾದೇಶದ ಉದಯಕ್ಕೆ ಕಾರಣವಾದ ಭಾರತ – ಪಾಕ್ ನಡುವಿನ ಯುದ್ಧದಲ್ಲಿ ಭಾರತದ ವಿಜಯದ ರೂವಾರಿಯಾದ ಬಗೆ, ಎರಡನೇ ವಿಶ್ವ ಮಹಾಯುದ್ಧದಲ್ಲಿ ಬರ್ಮಾದಲ್ಲಿ ಹೋರಾಟ ನಡೆಸಿದ ವೇಳೆ ತೀವ್ರವಾಗಿ ಗಾಯಗೊಂಡು ಬದುಕುಳಿದ ಘಟನೆಗಳು, ಸಹೋದ್ಯೋಗಿಗಳಿಗೆ ಮಾದರಿಯಾದ ಪರಿ, ಪೂರ್ವ ಪಶ್ಚಿಮದ ಗಡಿಗಳಲ್ಲಿ ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ನಡೆಸಿದ ದಾಳಿಯ ನೇತೃತ್ವ ವಹಿಸಿದ್ದ ಜಾಣ್ಮೆ ಹೀಗೆ ಹಲವಾರು ಸಾಹಸಮಯ ಘಟನೆಗಳನ್ನು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.
ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ...
READ MORE