ಹೋರಾಟಗಾರರೂ, ಬರಹಗಾರರೂ ಆದ ಬಿ.ವಿ ಕಕ್ಕಿಲ್ಲಾಯ ಅವರು ಜರ್ಮನ್ ತತ್ವಜ್ಞಾನಿ, ಕಮ್ಯುನಿಸ್ಟ್, ಸಾಮಾಜಿಕ ವಿಜ್ಞಾನಿ, ಪತ್ರಕರ್ತ ಮತ್ತು ಉದ್ಯಮಿಯಾಗಿದ್ದ ಫ್ರೆಡರಿಕ್ ಏಂಗೆಲ್ಸ್ ಹೋರಾಟದ ಬದುಕಿನ ಚಿತ್ರಣವನ್ನು ಈ ಕೃತಿಯಲ್ಲಿ ಪರಿಚಯಿಸಿದ್ಧಾರೆ.
ಬಹುಮುಖಿ ವ್ಯಕ್ತಿತ್ವದ ಏಂಗೆಲ್ಸ್ ರಾಜಕಾರಣ, ತತ್ವಶಾಸ್ತ್ರ, ಸಮಾಜಶಾಶ್ತ್ರ, ಇತಿಹಾಸ, ಚಿತ್ರಕಲೆ, ಮಿಲಿಟರಿ ಶಾಸ್ತ್ರ ಹೀಗೆ ಅನೇಕ ವಿಷಯಗಳಲ್ಲಿ ಪರಿಣಿತಿ ಗಳಿಸಿದ್ದ. ಈತನ ಜೀವನ ಶೈಲಿ, ಚಿಂತನಶೀಲ ಬದುಕಿನ ಹೆಜ್ಜೆಗಳನ್ನು ಈ ಕೃತಿಯಲ್ಲಿ ಪರಿಚಯಿಸಲಾಗಿದೆ. ಈ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗಳಿಸಿದೆ. ಕಕ್ಕಿಲ್ಲಾಯರ ಜನ್ಮಶತಮಾನೋತ್ಸವದ ಅಂಗವಾಗಿ ಮರುಮುದ್ರಣಗೊಂಡಿದೆ.
ಬಿ.ವಿ. ಕಕ್ಕಿಲ್ಲಾಯರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣ ಚಳುವಳಿಯ ನಾಯಕರು, ಭಾರತ ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕರು, ಪ್ರಶಸ್ತಿ ವಿಜೇತ ಲೇಖಕರು ಹಾಗೂ ಚಿಂತಕರು. ಉತ್ತರ ಕೇರಳದ ಕಾಸರಗೋಡು ತಾಲೂಕಿನ ಚೆರ್ಕಳದ ಸಮೀಪ, ಪಯಸ್ವಿನಿ ನದಿಯ ದಂಡೆಯ ಮೇಲಿರುವ ಬೇವಿಂಜೆಯಲ್ಲಿ ಶ್ರೀಮಂತ ಭೂಮಾಲಕರಾಗಿದ್ದ ವಿಷ್ಣು ಕಕ್ಕಿಲ್ಲಾಯರ ಕೊನೆಯ ಮಗನಾಗಿ ಏಪ್ರಿಲ್ 9, 1919 ರಂದು ಬಿ. ವಿ ಕಕ್ಕಿಲ್ಲಾಯ ಜನಿಸಿದರು. ಕಾಸರಗೋಡಿನಲ್ಲಿ ಆರಂಭಿಕ ಶಿಕ್ಷಣವನ್ನು ಪಡೆದ ಬಳಿಕ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜನ್ನು ಸೇರಿದ ಬಿ ವಿ ಕಕ್ಕಿಲ್ಲಾಯರು ಆ ಕಾಲದಲ್ಲಿ ಉತ್ತುಂಗದಲ್ಲಿದ್ದ ಭಾರತದ ಸ್ವಾತಂತ್ರ್ಯ ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ