ಕನ್ನಡದ ಏಳಿಗೆಗಾಗಿ ದುಡಿದವರು ಜಿ.ವೆಂಕಟಸುಬ್ಬಯ್ಯ. ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿರುವ ಅವರ ಬಾಲ್ಯ-ಜೀವನ ಸಾಧನೆ-ಅಧ್ಯಯನಶೀಲತೆ ಮುಂತಾದ ಕುತೂಹಲಕಾರಿ ಸಂಗತಿಗಳನ್ನು ಸಂಕ್ಷಿಪ್ತವಾಗಿ ನೀಡಿದ್ದಾರೆ ಲೇಖಕ ಟಿ.ಎಸ್. ಗೋಪಾಲ.ಈ ಕೃತಿಯನ್ನು ನಾ. ಸೋಮೇಶ್ವರ ಸಂಪಾದಿಸಿದ್ದಾರೆ.
ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...
READ MORE