ಲೇಖಕಿ ಶೋಭಾ ನಾಯಕ ಅವರ ಲೇಖನಗಳ ಕೃತಿ ‘ಗಡಿನಾಡ ಸಾಹಿತ್ಯ ಬಿಂಬ’. ಕೃತಿಗೆ ಮುನ್ನುಡಿ ಬರೆದ ಪಾಟೀಲ ಪುಟ್ಟಪ್ಪ, ‘ಈ ಕೃತಿ ಗಡಿನಾಡಿನಲ್ಲಿಯ ಕನ್ನಡ ಮತ್ತು ಮರಾಠಿ ಸಂಸ್ಕೃತಿ ಹಾಗೂ ಸಾಹಿತ್ಯದ ಕನ್ನಡಿಯಾಗಿದೆ. ಆನೆಯನ್ನು ಒಂದು ಕನ್ನಡಿಯಲ್ಲಿ ತೋರಿಸಲು ಹೇಗೆ ಅಸಾಧ್ಯವೋ ಹಾಗೆಯೇ ಎರಡೂ ಸಂಸ್ಕೃತಿಗಳ ಅಗಾಧತೆಯನ್ನು ಒಂದು ಪುಸ್ತಕದಲ್ಲಿ ತೋರಿಸಲು ಸಾಧ್ಯವಿಲ್ಲ. ಆದರೆ, ಶೋಭಾ ನಾಯಕ ಶ್ರಮಪಟ್ಟು ಆನೆಯ ಪ್ರತಿಬಿಂಬವನ್ನು ಈ ಕೃತಿಯಲ್ಲಿ ತೋರಿಸಿದ್ದಾರೆ.’ ಎಂದು ಪ್ರಶಂಸಿಸಿದ್ದಾರೆ.
ಶೋಭಾ ನಾಯಕ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರೈಸಿದರು. ಕಂಪ್ಯೂಟರ್ ಸಾಯನ್ಸ್ ಡಿಪ್ಲೊಮಾ ಆಂಡ್ ಇಂಜನಿಯರಿಂಗ್, ಪಿ.ಜಿ.ಡಿಪ್ಲೊಮಾ ಇನ್ ಜೈನಾಲಾಜಿ ಹಾಗೂ ಆರು ಸುವರ್ಣ ಪದಕಗಳೊಂದಿಗೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಎಂ.ಫಿಲ್ ಹಾಗೂ ಪಿಹೆಚ್. ಡಿ. ಪದವಿಗಳನ್ನು ಪೂರೈಸಿದ ಇವರು ಪ್ರಸ್ತುತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಿತ್ರಕಲೆ ಹಾಗೂ ಸಾಹಿತ್ಯ ಇವರ ಆಸಕ್ತಿಯ ಕ್ಷೇತ್ರಗಳು. ...
READ MORE