ಗರ್ದಿಗಮ್ಮತ್ತು ಕತಾಸಂಕಲನದಲ್ಲಿ ಒಟ್ಟು 14 ಕತೆಗಳಿದ್ದು ಕಾರ್ಪೋರೇಟ್ ಬದುಕಿನ ವಾಸ್ತವ ಜಗತ್ತನ್ನು ತೆರೆದಿಡುತ್ತದೆ. ಗಡಿನಾಡ ಭಾಷೆಯನ್ನು ಪ್ರಸ್ತುತಪಡಿಸುವ ಈ ಕತಾ ಸಂಕಲನಕ್ಕೆ ಡಾ.ಡಿ.ಎಸ್.ಚೌಗಲೆ ಬೆನ್ನುಡಿ ಬರೆದಿದ್ದಾರೆ. ಕತಾ ಸಂಕಲನದ ಕರ್ತೃ-ಬಸವಣ್ಣೆಪ್ಪಾ ಕಂಬಾರ.
ಬೆಳಗಾವಿ ಜಿಲ್ಲೆಯ ಘೋಡಗೇರಿಯವರಾದ ಬಸವಣ್ಣೆಪ್ಪ ಕಂಬಾರ ಅವರು ಕನ್ನಡದ ಭರವಸೆಯ ಕತೆಗಾರರಲ್ಲಿ ಒಬ್ಬರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪಠ್ಯಪುಸ್ತಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಸವಣ್ಣೆಪ್ಪಾ ಅವರು ’ಆಟಿಕೆ’, ’ಗಾಂಧಿ ಪ್ರಸಂಗ’ ಮತ್ತು ಗರ್ದಿ ಗಮ್ಮತ್ ಎಂಬ ಮೂರು ಕತಾ ಸಂಕಲನ ಪ್ರಕಟಿಸಿದ್ದಾರೆ. ಅವರ ಆಟಿಕೆ’ ಸಂಕಲನಕ್ಕೆ ಛಂದ ಪುಸ್ತಕ ಬಹುಮಾನ, ಶಿವಮೊಗ್ಗ ಕರ್ನಾಟಕ ಸಂಘದ ಯು.ಆರ್. ಅನಂತಮೂರ್ತಿ ಕತಾ ಪ್ರಶಸ್ತಿ, ಧಾರವಾಡದ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ನ ಬೇಂದ್ರೆ ಪುಸ್ತಕ ಬಹುಮಾನ ಸಂದಿವೆ. ...
READ MORE