’ಗೆರೆಮಿರಿವ ಚಿನ್ನದದಿರು -ಗೋಪಾಲಕೃಷ್ಣ ಅಡಿಗ- ಒಂದು ಪ್ರವೇಶ’ ಕೃತಿಯು ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಪ್ರಕಟಿತ ಪುಸ್ತಕ.
ಅಡಿಗರ ಸಮಗ್ರ ಕಾವ್ಯವನ್ನು ಓದಿದಾಗ `ಆಧುನಿಕ ಮಹಾಕಾವ್ಯ'ವೊಂದನ್ನು ಓದಿದ ಅನುಭವವಾಗುತ್ತದೆ. ಇವರ ಕಾವ್ಯದ ನಾಯಕ ಇಪತ್ತನೇ ಶತಮಾನದ ಸ್ವಾತಂತ್ರ್ಯೋತ್ತರ ಭಾರತದ ಆಧುನಿಕ ಸಂವೇದನೆಯ ವ್ಯಕ್ತಿ ಸ್ವತಂತ್ರ ಭಾರತದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ವಾಸ್ತವ ಇವರ ಕಾವ್ಯದಲ್ಲಿ ಆಕಾರ ಪಡೆದಂತೆ ಬಹುಶಃ ಕನ್ನಡದಲ್ಲಿ ಮತ್ತೆ ಯಾರ ಕಾವ್ಯದಲ್ಲೂ ಕಾಣಿಸಿಕೊಂಡಿಲ್ಲವೆನ್ನಬಹುದು. ಇದರ ಹಿನ್ನೆಲೆಯ ಮಾರ್ಗದಲ್ಲಿ ಸಾಗಿದ ಲೇಖಕರು ಕವಿ ಗೋಪಾಲಕೃಷ್ಣ ಅಡಿಗರ ಕಾವ್ಯದ ಒಂದು ಪ್ರವೇಶ’ ವನ್ನು ಈ ಕೃತಿಯ ಮೂಲಕ ತೆರೆದಿಟ್ಟಿದ್ದಾರೆ.
ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಮಂಡ್ಯ ಜಿಲ್ಲೆಯ ನರಹಳ್ಳಿಯಲ್ಲಿ1953 ಸೆಪ್ಟೆಂಬರ್ 5ರಂದು ಜನಿಸಿದರು. 1973ರಲ್ಲಿ ಬಿ.ಎ. (ಆನರ್), 1975ರಲ್ಲಿ ಎಂ.ಎ. ಪದವಿಗಳನ್ನು ಪ್ರಥಮ ಬ್ಯಾಂಕ್, ಚಿನ್ನದ ಪದಕಗಳೊಂದಿಗೆ ಪಡೆದ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯಪ್ರಶಸ್ತಿ ಮನ್ನಣೆ ಗಳಿಸಿದ್ದರು. ಭಾರತ ಸರ್ಕಾರದ ಪ್ರತಿಭಾ ವಿದ್ಯಾರ್ಥಿವೇತನ ಪಡೆದವರು. 1992ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿರುವ ನರಹಳ್ಳಿಯವರು ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. 'ಅನುಸಂಧಾನ', 'ನವ್ಯತೆ', 'ಇಹದ ಪರಿಮಳದ ಹಾದಿ', 'ಸಾಹಿತ್ಯ ಸಂಸ್ಕೃತಿ', “ಕುವೆಂಪು ನಾಟಕಗಳ ಅಧ್ಯಯನ', ...
READ MORE