ಗೌತಮನ ಕುರಿತ ಜೀವನ ಚರಿತ್ರೆ ಪುಸ್ತಕವಿದು. ಲೇಖಕ ಎನ್. ರಂಗನಾಥ ಶರ್ಮಾ ಅವರು ರಚಿಸಿದ್ದಾರೆ. ಪ್ರಸಿದ್ಧರಾದ ಏಳು ಋಷಿಗಳಲ್ಲಿ ಒಬ್ಬರು. ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಹಾರ, ಬಟ್ಟೆಗಳನ್ನು ಕೊಟ್ಟು ವಿದ್ಯಾಭ್ಯಾಸ ಮಾಡಿಸುತ್ತಿದ್ದ ಕುಲಪತಿ. ಕೋಪವನ್ನು ತಡೆಯದೆ ತಪ್ಪು ಮಾಡಿದರೂ ತಿದ್ದಿಕೊಳ್ಳುವ ವಿವೇಕ ತೋರಿದರು. ಕ್ಷಾಮ ಬಂದಾಗ ಕಷ್ಟ ಪಡುತ್ತಿದ್ದವರಿಗಾಗಿ ಪರಿತಪಿಸಿದರು, ನೆರವಾದರು ...ಹೀಗೆ ಅಧ್ಯಾಯಗಳಡಿ ಘನ ವ್ಯಕ್ತಿತ್ವದ ಅನಾವರಣ ಮಾಡಲಾಗಿದೆ.
ವಿದ್ವಾನ್ ಎನ್. ರಂಗನಾಥಶರ್ಮಾ ಅವರು 1916 ಜನವರಿ 07ರಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನಡಹಳ್ಳಿ ಗ್ರಾಮದಲ್ಲಿ ಜನಿಸಿದರು. ತಂದೆ-ತಿಮ್ಮಪ್ಪ, ತಾಯಿ-ಜಾನಕಮ್ಮ. ಪ್ರಾಥಮಿಕ ವಿದ್ಯಾಭ್ಯಾಸ ನಡಹಳ್ಳಿಯಲ್ಲಿ, ಮಾಧ್ಯಮಿಕ ವಿದ್ಯಾಭ್ಯಾಸವು ಸೊರಬದಲ್ಲಿ ಮುಗಿಯಿತು. ಅಗಡಿಯ ಆನಂದವನ ಆಶ್ರಮದಲ್ಲಿ ಸಂಸ್ಕೃತ ಕಲಿತ ಅವರು ನಂತರ ಕೆಳದಿ ಸಂಸ್ಕೃತ ಪಾಠಶಾಲೆಗೆ ಸೇರಿದರು. ಇದರೊಂದಿಗೆ ಖಾಸಗಿಯಾಗಿ ಮದರಾಸಿನ ವಿಶ್ವವಿದ್ಯಾಲಯದ ಕನ್ನಡ ವಿದ್ವತ್ ಮತ್ತು ಮೈಸೂರಿನ ಕನ್ನಡ ಪಂಡಿತ ಪರೀಕ್ಷೆಗಳನ್ನೂ ಪಾಸ್ ಮಾಡಿದರು. ಡಿವಿಜಿ ಅವರ ಒಡನಾಡಿ ಆಗಿದ್ದ ಅವರು ಡಿವಿಜಿ ಮರಣಾ ನಂತರ ‘ಮರಳು ಮುನಿಯನ ಕಗ್ಗ’ದ ಕರಡು ತಿದ್ದಿದವರೇ ರಂಗನಾಥ ಶರ್ಮಾ. ಸಂಸ್ಕೃತ ಕೃತಿಗಳು: ಬಾಹುಬಲಿ ವಿಜಯಂ (ಐತಿಹಾಸಿಕ ನಾಟಕ), ಏಕಚಕ್ರಂ (ಪೌರಾಣಿಕ ನಾಟಕ, ಗುರುಪಾರಮಿತ್ರ ಚರಿತಂ, ಗೊಮ್ಮಟೇಶ್ವರ ಸುಪ್ರಭಾತಂ, ಗೊಮ್ಮಟೇಶ ...
READ MORE