'Friday for Future'(ಭವಿಷ್ಯಕ್ಕಾಗಿ ಶುಕ್ರವಾರ) ಘೋಷವಾಕ್ಯದ ಮೂಲಕ ವಿಶ್ವದೆಲ್ಲೆಡೆ ಪರಿಸರ ಉಳಿಸಿ ಆಂದೋಲನಕ್ಕೆ ನಾಂದಿ ಹಾಡಿರುವ 15ರ ಹರೆಯದ ಯುವತಿ ಗ್ರೇತಾ ಥನ್ಬರ್ಗ್ ಸ್ವೀಡನ್ ಮೂಲದವಳು. ಪ್ರತಿ ಶುಕ್ರವಾರ ಜಾಗತಿಕ ತಾಪಮಾನ ಏರಿಕೆ ವಿರುದ್ಧ ’School Strike for climate change' ಪ್ರತಿಭಟನೆ ಆರಂಭಿಸಿದಳು. ಇವಳ ಮುಷ್ಕರವನ್ನು ಬೆಂಬಲಿಸಿ 130 ರಾಷ್ಟ್ರಗಳಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಡಿದರು. ಉರಿಪ್ರಳಯದ ಹೊಸ್ತಿಲಲ್ಲಿರುವ ಭೂಮಿಯನ್ನು ಉಳಿಸಲೆಂದು ಹೋರಾಡುತ್ತಿರುವ ಗ್ರೇತಾಳ ಪರಿಚಯ, ಹೋರಾಟ, ತಾಪಮಾನ ಏರಿಕೆ ಕುರಿತಂತೆ ಈ ಕೃತಿಯಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರಾದ ನಾಗೇಶ ಹೆಗಡೆ ಅವರ ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಕ್ಕಮನೆ. ಮಾಧ್ಯಮಿಕ ಶಿಕ್ಷಣವನ್ನು ಯಡಳ್ಳಿಯ ವಿದ್ಯೋದಯ ಹೈಸ್ಕೂಲಿನಲ್ಲಿ ಪೂರೈಸಿದ ಅವರು ಶಿರಸಿಯ ಮೋಟಿನಸರ ಸ್ಮಾರಕ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭೂವಿಜ್ಞಾನದಲ್ಲಿ ಬಿಎಸ್ಸಿ ಮುಗಿಸಿದರು. ಖರಗಪುರ ಐಐಟಿಯಲ್ಲಿ ಆನ್ವಯಿಕ ಭೂವಿಜ್ಞಾನದಲ್ಲಿ ಎಂಎಸ್ಸಿ (ಟೆಕ್) ಮಾಡಿದರು. ದೆಹಲಿಯ ಜವಾಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದಲ್ಲಿ ಎಂ.ಫಿಲ್ ಮಾಡಿದರು. ಶಿಕ್ಷಕ, ಪರಿಸರವಾದಿ ಹಾಗೂ ಪತ್ರಕರ್ತರಾಗಿ ವಿಭಿನ್ನ ಪಾತ್ರಗಳನ್ನು ವಹಿಸುತ್ತಿರುವ ನಾಗೇಶ ಹೆಗಡೆ ಸುಧಾ ವಾರಪತ್ರಿಕೆಯ ಸಹಾಯಕ ಸಂಪಾದಕರಾಗಿದ್ದರು. ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನದ ಲೇಖನಗಳನ್ನು ಬರೆದಿರುವ ...
READ MORE