ಗೃಹಭಂಗ

Author : ಎಸ್.ಎಲ್. ಭೈರಪ್ಪ

Pages 372

₹ 465.00

Buy Now


Year of Publication: 2014
Published by: ಸಾಹಿತ್ಯ ಭಂಡಾರ

Synopsys

ಎಸ್. ಎಲ್. ಭೈರಪ್ಪನವರ ಗೃಹಭಂಗವು ಪ್ರಸಿದ್ಧ ಮತ್ತು ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾದ ಕಾದಂಬರಿ. ಈ ಕಾದಂಬರಿಯು ತಿಪಟೂರು, ಚೆನ್ನರಾಯಪಟ್ಟಣ ತಾಲ್ಲೂಕುಗಳನ್ನೊಳಗೊಂಡ ಭಾಗದ ಪ್ರಾದೇಶಿಕ ಹಿನ್ನೆಲೆ ಹೊಂದಿದೆ. ‘ಗೃಹಭಂಗ’ವು ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ. ಈ ಕಾದಂಬರಿಯು ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುತ್ತದೆ, ಬದುಕಿಗೆ ಬದುಕೇ ಬರೆದ ಭಾಷ್ಯ. ‘ಗೃಹಭಂಗ’ ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ.  ಗೃಹಭಂಗ ಎಂಬುದು ಈ ಕೃತಿಯ ಕೇಂದ್ರಕಲ್ಪನೆಯಲ್ಲ. ಜೀವನಚಿತ್ರಣದ ಪ್ರಯತ್ನವೇ ಇದರ ದೃಷ್ಟಿ. ಇಲ್ಲಿ ಮನೆ ಒಡೆಯುವುದು, ಮುರಿಯುವುದು ಮಾತ್ರವಲ್ಲ; ಪ್ಲೇಗು, ಕಜ್ಜಿ, ಬರ, ಮೊದಲಾಗಿ ಇನ್ನೂ ಎಷ್ಟೋ ಸಂಗತಿಗಳು, ವಿವಿಧ ರೀತಿಯ ಪಾತ್ರಗಳು ಬರುತ್ತವೆ. ಇವು ಮೂಡಿ ನಡೆದಂತೆ ಒಂದು ಜೀವನ ದೃಷ್ಟಿಯ ಹಿನ್ನೆಲೆಯಲ್ಲಿ ಮಸುಕು ಮಸುಕಾಗಿ ಕಾಣಬಹುದು.

About the Author

ಎಸ್.ಎಲ್. ಭೈರಪ್ಪ
(20 August 1931)

ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...

READ MORE

Related Books