ಗೊರೂರು ಅನಂತರಾಜು ಅವರ ಕೃತಿ ಹಬ್ಬಗಳು ಜನಪದರ ನಂಬಿಕೆಗಳು . ಹಬ್ಬಗಳು-ಜನಪದರ ನಂಬಿಕೆಗಳು ಎಂಬ ಮೊದಲ ಲೇಖನದಲ್ಲಿ ಭಾರತದಲ್ಲಿ ಆಚರಿಸುವ ಹಬ್ಬಗಳ ಬಗ್ಗೆ ಬಹಳ ಸುಂದರವಾಗಿ ಬರೆದಿದ್ದಾರೆ.ಪ್ರತಿಯೊಂದು ವಿಚಾರವನ್ನೂ ಕೂಲಂಕುಶವಾಗಿ ಚರ್ಚಿಸಿದ್ದಾರೆ. ಭಾರತೀಯ ಸಂಸ್ಕ್ರತಿಯು ವಿಶ್ವದಲ್ಲಿಯೇ ವಿಶಿಷ್ಟವಾದುದು.ಸಂಸ್ಕ್ರುತಿ ಎನ್ನವುದು ಸಮೂಹ ಸಮ್ಮತ ಜೀವನ ಪದ್ಧತಿ. ಎಲ್ಲಾ ಹಬ್ಬಗಳ ಅಂದರೆ ಸಂಕ್ರಾಂತಿ, ಶಿವರಾತ್ರಿ, ಯುಗಾದಿ, ಗೌರಿಗಣೇಶ,ಬಲಿಪಾಡ್ಯಮಿ, ದೀಪಾವಳಿ ಹಬ್ಬಗಳ ಆಚರಣೆ ಆ ಹಬ್ಬಗಳ ಹಿಂದಿರುವ ವಿಶೇಷತೆಯ ಬಗ್ಗೆ ವಿಸ್ತ್ರುತವಾಗಿ ವಿವರಿಸಿದ್ದಾರೆ.
ಹಾಸನ ಜಿಲ್ಲೆಯ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದ ಚಿರಪರಿಚಿತರಾದ ಗೊರೂರು ಅನಂತರಾಜು ಸಾಹಿತಿಯಾಗಿ, ನಾಟಕಕಾರರಾಗಿ, ರಂಗಭೂಮಿಯ ಕಲಾವಿದರಾಗಿ, ಹವ್ಯಾಸಿ ಪತ್ರಕರ್ತರಾಗಿ ಪ್ರಸಿದ್ದಿ ಪಡೆದವರು.ಇವರು ಹುಟ್ಟಿ ಬೆಳೆದದ್ದು ಗೊರೂರು ಗ್ರಾಮದಲ್ಲಿ. 13-05-1961 ಜನಿಸಿದ ಇವರ ತಂದೆ ಬಸವರಾಜು ಮತ್ತು ತಾಯಿ ಪುಟ್ಟಲಕ್ಕ್ಷ್ಮಮ್ಮ . ಪ್ರಾಥಮಿಕ ಶಿಕ್ಷಣದಿಂದ ಪದವಿಪೂರ್ವ ಶಿಕ್ಷಣದವರೆಗೆ ಸ್ವಗ್ರಾಮ ಗೊರೂರಿನಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಪಡೆದು ಹೇಮಾವತಿ ನೀರಾವರಿ ನಿಗಮದಲ್ಲಿ ಗುಮಾಸ್ತರಾಗಿ ಕರ್ತವ್ಯ ನಿರ್ವಹಿಸುತ್ತಲೇ ಹಾಸನದ ಕೃಷ್ಣ ಸಂಜೆ ಕಾಲೇಜಿನಲ್ಲಿ ಎಲ್ಎಲ್ಬಿ ಪದವಿ ವ್ಯಾಸಂಗ ಮಾಡಿದ್ದಾರೆ. ಪ್ರಥಮ ಧರ್ಜೆ ...
READ MORE