‘ಹಸಿರು ಟಾವೆಲ್’ ರೈತನೊಬ್ಬನ ಜೀವನ ಕಥನ- ಲೇಖಕ ಟಿ.ಎಸ್. ಗೊರವರ ಅವರ ಕೃತಿ. ಕೃತಿಗೆ ಲೇಖಕಿ ವಿನಯಾ ಒಕ್ಕುಂದ ಅವರು ಮುನ್ನುಡಿ ಬರೆದಿದ್ದಾರೆ. ‘ಕಣ್ಮುಟ್ಟುವತನಕ ಹರಡಿರುವ ಕಸುವುಳ್ಳ ಕಪ್ಪುಮಣ್ಣಿನ ಹೊಲ. ತನಗೆ ತಿಳಿದಾಗ ಬಂದು ಸುರಿದು ಹೋಗುವ ಮಳೆ. ಒಂದಕ್ಕೊಂದು ಜತ್ತು ತಪ್ಪಿದ ಒಗೆತನ. ಆದರೂ ಒಕ್ಕಿದ್ದಕ್ಕೆ ಕಣ ತುಂಬುವ ನೆಲದ ತಾಯ್ತನ. ರೋಣ, ಗಜೇಂದ್ರಗಡ, ನರಗುಂದ, ನವಲಗುಂದದ ಚೌಕಿಯ ಬಾಳೇವು ಇದು. ದಾಂಪತ್ಯವಿರಸದ ಮಕ್ಕಳಂತೆ ಉದ್ವೇಗದ ಏರುಗಚ್ಚಿನಲ್ಲಿರುವ ಜನ. ದುಡಿಮೆ-ವಿರಾಮ, ಪ್ರೀತಿ-ಜಗಳ, ಬಾಂಧವ್ಯ-ದ್ವೇಷ, ಕೂಡುಣ್ಣುವ-ಕೂಡಿ ಕಾದುವ ಎಲ್ಲದರಲ್ಲೂ ಪುಟ್ಟಪೂರಾ ಅನುಭವಿಸಿಯೇನೆಂಬ ತಾದ್ಯಾತ್ಮ. ಜಮೀನ್ದಾರಿಕೆಯ ಅಹಮಿಕೆಯನ್ನೇ ಅಲಕ್ಷ್ಯ ಮಾಡಿ ಎಲ್ಲರೊಳಗೊಂದಾಗಿ ಬಾಳೇವು ಮಾಡಬೇಕೆಂಬ ಜೀವನ ವಿವೇಕವನ್ನು ಕಟ್ಟಿಕೊಂಡವರು. ಕಾಡಿನ ಹಸಿರಿಲ್ಲ ಎಂದು ಕೊರಗದೆ, ಸುರೇಪಾನದ ಹಳದಿ ದಿಬ್ಬಣ ನಿಲಿಸಿ, ಸೌಖ್ಯದ ಪದರರೂಪೀ ಸಂರಚನೆಯನ್ನು ನಿರೂಪಿಸಿದ ಜನ. ಬಯಲುಸೀಮೆಯ ಜನಬದುಕಿನ ಕಥನವನ್ನು ಈ ಜೀವನ ವೃತ್ತಾಂತ ನೆನಪಿಸುತ್ತದೆ’. ಎನ್ನುತ್ತಾರೆ
ಜೊತೆಗೆ ,‘ಇದು ಕೊಡ್ಲೆಪ್ಪ ಎಂಬ ಅಬೋಧ ಹುಡುಗ ತನ್ನ ಅನಾಥ ಪ್ರಜ್ಞೆಯೊಂದಿಗೆ ಗುದಮುರಿಗಿ ಹಾಕುತ್ತಲೇ ಬಾಳನ್ನು ಕಟ್ಟಿಕೊಂಡ ಕವಿತೆ. ಬಿರುಬಿಗಿದ ಮಣ್ಣ ಪದರದಿಂದ ಎಳೆಹುಲ್ಲಿನ ದಳಗಳು ತಲೆಯೆತ್ತುವ ಕಥೆ. ಈ ದೇಶದ ಸಾಮಾನ್ಯಾತಿಸಾಮಾನ್ಯನ ಬಾಳಸಂಪುಟ. ಲಿಂಗ ಜಾತಿ ಕುಲ ಕಷ್ಟಗಳಿಂದಲೂ ವಿಶಿಷ್ಟ ಎಂದು ಗುರುತಿಸಿಕೊಳ್ಳಲು ಆಗದವನ ಚರಿತ್ರೆ. ಮನುಷ್ಯ ಬಾಳು ವಿಶಿಷ್ಟವಾಗುವುದು ಅವನದನ್ನು ನಿರ್ವಹಿಸುವ ಬಗೆಯಲ್ಲಿ ಎಂದು ತಿಳಿಸುವ ಟಿಪ್ಪಣಿ. ವ್ಯಕ್ತಿಕಥೆಯೊಂದಿಗೆ ಸಮುದಾಯ ಕಥೆಯನ್ನು ಬೆರೆಸಿದ ಲಾವಣಿ ಎಂದು ಲೇಖಕಿ ವಿನಯಾ ಒಕ್ಕುಂದ ಅವರು ಅಭಿಪ್ರಾಯಪಟ್ಟಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೂರ ಗ್ರಾಮದ ಟಿ.ಎಸ್. ಗೊರವರ, 1984 ಜೂನ್ 10 ರಂದು ಜನಿಸಿದರು. ರಾಜೂರು, ಗಜೇಂದ್ರಗಡದಲ್ಲಿ ವಿದ್ಯಾಭ್ಯಾಸ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ಭ್ರಮೆ (2007) ಕಥಾ ಸಂಕಲನ, ಆಡು ಕಾಯೋ ಹುಡುಗನ ದಿನಚರಿ (2011) ಅನುಭವ ಕಥನ, ಕುದರಿ ಮಾಸ್ತರ (2012) ಕಥಾ ಸಂಕಲನ, ರೊಟ್ಟಿ ಮುಟಗಿ (2016) ಕಾದಂಬರಿ, ಮಲ್ಲಿಗೆ ಹೂವಿನ ಸಖ (2018) ಕಥಾ ಸಂಕಲನ ಪ್ರಕಟಿತ ಕೃತಿಗಳು. ತನ್ನ ಎದೆಯ ಮೆದುವನ್ನೇ ನಾದಿ ನಾದಿ ಮಿದ್ದು ಒಂದು ಹದದಲ್ಲಿ ಕೆತ್ತಿದಂತಿರುವ ಇವರ ...
READ MORE