ಖ್ಯಾತ ಕಾದಂಬರಿಕಾರ ತ.ರಾ. ಸುಬ್ಬಾರಾವ್ ಅವರ ಕಾದಂಬರಿ-ಹೊಸ ಹಗಲು. ಐತಿಹಾಸಿಕ ಕಾದಂಬರಿಯಾಗಿದ್ದರೂ ಹೊಸ ದೃಷ್ಟಿಕೋನವಿದೆ. ಕಥಾವಸ್ತು, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕೃತಿಯು ಓದುಗರ ಗಮನ ಸೆಳೆಯುತ್ತದೆ. ದುರ್ಗದವರನ್ನು ಸೋಲಿಸಬೇಕೆಂದು ಹರಪನಹಳ್ಳಿಯವರು ಹಾಗೂ ಹರಪನಹಳ್ಳಿಯವರನ್ನು ಸೋಲಿಸಬೇಕೆಂದು ಭರಮಣ್ಣ ಹಾಗೂ ಆತನ ಕಡೆಯವರ ಪಟ್ಟು ಇಲ್ಲಿಯ ಕಥಾ ವಸ್ತು. ಈ ಮಧ್ಯೆ ನಡೆಯುವ ರಾಜಕಾರಣ, ಧಾರ್ಮಿಕ ನಂಬಿಕೆಗಳು ಇತ್ಯಾದಿ ಕಾದಂಬರಿಯ ಓದಿನ ವೇಗವನ್ನು ಹೆಚ್ಚಿಸುತ್ತವೆ.
ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...
READ MORE