ಹಿರಿಯ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕಾದಂಬರಿ-ಹೇಮಾವತಿ. ಈ ನದಿ ಕಾವೇರಿ ನದಿಯ ಮುಖ್ಯ ಉಪನದಿ. ಚಿಕ್ಕಮಗಳೂರು ಜಿಲ್ಲೆಯ ಜಾವಳಿಯ ಪಶ್ಚಿಮ ಘಟ್ಟದ ಶ್ರೇಣಿಯಲ್ಲಿ ಉಗಮಿಸುವ ಈ ನದಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹರಿದು, ಕೃಷ್ಣರಾಜಸಾಗರದ ಹಿನ್ನೀರಿನಲ್ಲಿ ಕಾವೇರಿ ನದಿಯನ್ನು ಸೇರುತ್ತದೆ. ಈ ನದಿಯ ಹಾಗೆ ಹಳ್ಳಿಯ ಚಿತ್ರಣವನ್ನು ಕಟ್ಟಿಕೊಡುವ ಈ ಕಾದಂಬರಿಯು ವರ್ಣಭೇದ, ಅಸ್ಪೃಶ್ಯತೆ, ಜಾತಿ, ಮತ, ಮೇಲು ಕೀಳು, ಬ್ರಾಹ್ಮಣರು ಮತ್ತು ಹೊಲೆಯರ ನಡುವಿನ ಜಗಳ, ಮೇಲಿನವರು ಕೆಲಗಿನವರನ್ನು ಒಡೆದು ಆಳುವ ರೀತಿ, ನಗರದ ಜೀವನ, ಸಂಬಂಧಗಳ ಅರ್ಥಹೀನತೆ, ಅವಸರದ ಬದುಕು ಎಲ್ಲವನ್ನೂ ಕಣ್ಣಿಗೆ ಕಟ್ಟುವಂತಹ ವಿವರಗಳಿವೆ. ಈ ಕಾದಂಬರಿ ಮೊದಲು ಮುದ್ರಣವಾಗಿದ್ದು 1948ರಲ್ಲಿ. ಮಹಾನಗರಗಳ ಭವಿಷ್ಯವನ್ನು ಆಗಲೇ ಖಚಿತವಾಗಿ ನುಡಿದಿದ್ಈದರು ಎಂಬುದಕ್ಕೆ ಈ ಕಾದಂಬರಿ ಕನ್ನಡಿ ಹಿಡಿಯುತ್ತದೆ.
ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...
READ MORE