ಲೇಖಕ ಗಿರಿಮನೆ ಶ್ಯಾಮರಾವ್ ಅವರ ಕೃತಿ-ಹೇಮಾವತಿ ತೀರದ ಕೌತುಕ ಕತೆಗಳು. ಮಲೆನಾಡಿನ ರೋಚಕ ಕತೆಗಳ ಸರಣಿ ಭಾಗ-9. ಮಲೆನಾಡು, ಅರೆ ಮಲೆನಾಡು ಹಾಗೂ ಬಯಲುಸೀಮೆಯ ಪ್ರದೇಶದ ಭೌಗೋಲಿಕ ವ್ಯತ್ಯಾಸಗಳನ್ನು ವಿವರಿಸುತ್ತಲೇ ಕಾಡಿನ ದಟ್ಟ ಅನುಭವವನ್ನು ನೀಡುವ ಕೃತಿ ಇದು. ಹೇಮಾವತಿ ನದಿ ತೀರ, ಅಲ್ಲಿಯ ವಿಸ್ಮಯಕಾರಿ ಘಟನೆಗಳು, ಮೈ ನಡುಕ ಹುಟ್ಟಿಸುವ ಸನ್ನಿವೇಶಗಳು ಕಣ್ಣಿಗೆ ಕಟ್ಟುವಂತೆ ವಿವರಿಸಿದ್ದು, ಕಾಡಿನ ಕ್ರೌರ್ಯವನ್ನು, ಸೌಂದರ್ಯವನ್ನು ಏಕಕಾಲಕ್ಕೆ ಮನವರಿಕೆ ಮಾಡಿಸುವಲ್ಲಿ ಕೃತಿ ಸಫಲವಾಗಿದೆ.
ಗಿರಿಮನೆ ಶ್ಯಾಮರಾವ್ ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿನೂತನ ರೀತಿಯ ಬರವಣೆಗೆಗಳಿಂದ ಕನ್ನಡ ಓದುಗ ಆಸಕ್ತರ ನಡುವೆ ಚಿರಪರಿಚಿತರು. ಇವರ ಹುಟ್ಟೂರು ಹಾಸನ ಜಿಲ್ಲೆಯ ಸಕಲೇಶಪುರದ ಗಾಣದಹೊಳೆ ಗ್ರಾಮ. ಪತ್ನಿ ಶಶಿಕಲಾ ಹಾಗು ಪುತ್ರ ಚೇತನ್ ಶರ್ಮ. ಕೃಷಿಕನಾಗಿ 35 ವಸಂತಗಳ ಸುದೀರ್ಘ ಅನುಭವವಿದೆ. ಪಶ್ಚಿಮ ಘಟ್ಟದ ಪ್ರಕೃತಿ, ಜೀವಜಗತ್ತಿನ ಪರಿಚಯ, ಮನುಷ್ಯರ ಮನಸ್ಸಿನ ಅವಲೋಕನ, ವೈಜ್ಞಾನಿಕವಾದ ವೇದದ ಒಳಗನ್ನು ತಿಳಿಯುವ ಕುತೂಹಲ ಇವೆಲ್ಲವೂ ಇವರನ್ನು ಬರವಣಿಗೆಯ ಕ್ಷೇತ್ರದೆಡೆಗೆ ಸೆಳೆದಿದೆ. ಹವ್ಯಾಸಿ ಪತ್ರಿಕಾ ಅಂಕಣಕಾರರಾಗಿದ್ದಾರೆ. ಮಕ್ಕಳ ಸಾಹಿತ್ಯ, ವ್ಯಕ್ತಿತ್ವ ವಿಕಸನ, ಚಿಂತನೆ, ಕಾದಂಬರಿ ಹೀಗೆ ಹಲವಾರು ...
READ MORE