ಹೆಣ್ಣು ಎಂದರೆ ಏನು..!

Author : ಸಿ.ಎಚ್. ರಾಜಶೇಖರ್

Pages 154

₹ 120.00




Year of Publication: 2012
Published by: ಸೌಮ್ಯಶ್ರೀ ಪುಸ್ತಕ ಪ್ರಕಾಶನ
Address: ಬೆಂಗಳೂರು

Synopsys

ಲೇಖಕ ಸಿ.ಎಚ್. ರಾಜಶೇಖರ ಅವರ ಕೃತಿ-ಹೆಣ್ಣು ಎಂದರೆ ಏನು? ಅಮರ ಜಾತಕ ಕಥೆಗಳನ್ನು ಜಗತ್ತಿನ ಸರ್ವಶ್ರೇಷ್ಠ ಕಥೆಗಳೆಂದು ಪರಿಗಣಿಸಲಾಗಿದೆ. ಇವು ಸಂದರವಾದ ಕಥೆಗಳು. ಸಮಗ್ರ ಮತ್ತು ಸಮ್ಯಕ್ ದೃಷ್ಠಿಕೋನದಿಂದ ಕೂಡಿದ ಪರಿಪೂರ್ಣ ಕಥೆಗಳಾಗಿವೆ. ಗೌತಮ ಬುದ್ಧರ ಬದುಕು ಮತ್ತು ಬೋಧನೆಗಳನ್ನು ಒಳಗೊಂಡಿದೆ. ಇಲ್ಲಿನ ಮೂಲಭೂತ ಪ್ರಶ್ನೆ ಎಂದರೆ, ನಾವೇಕೆ ಒಳ್ಳೆಯರಾಗಬೇಕು ಎಂಬುದೇ ಆಗಿದೆ. ಅದಕ್ಕೆ ಪ್ರತಿ ಉತ್ತರವಾಗಿ ಇಲ್ಲಿನ ಒಂದೊಂದು ಕಥಾರತ್ನಗಳು ಸ್ವಯಂ ನಮ್ಮನ್ನು ನಾವೇ ಹೇಗೆ ಉನ್ನತವಾದ ಮಟ್ಟಿಕ್ಕೆ ಏರಿಸಿಕೊಳ್ಳಬಹುದು ಎಂಬುದನ್ನು ಸಾಬೀತು ಪಡಿಸುತ್ತವೆ. ನಮ್ಮ ತಪ್ಪು, ಅಜ್ಞಾನ, ಸಂಕುಚಿತ ಮನೋಭಾವ ಮತ್ತು ಕುಬ್ಜತೆಯನ್ನು ಮನದಟ್ಟು ಮಾಡಿಕೊಡುವುದುರ ಜೊತೆಗೆ ಒಳ್ಳೆಯ ಮಾರ್ಗವನ್ನು ಅನುಸರಿಸಿದಾಗ ಮಾತ್ರ ಒಳ್ಳೆಯ ಫಲವನ್ನು ಪಡೆಯಬಹುದು ಎಂಬುದನ್ನು ದೃಢಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಜಾತಕ ಕಥೆಗಳನ್ನು ಧರ್ಮಗ್ರಂಥವೆಂದು ಅಂಗೀಕರಿಸಲಾಗಿದೆ. ಇಲ್ಲಿನ ಕಥೆಗಳ ಉದ್ದೇಶ, ಗುರಿ, ಮತ್ತು ಭರವಸೆ ಎಂದರೆ ಬದುಕಿನ ಉನ್ನತಿ, ಶ್ರೇಷ್ಠತೆ, ಯಶಸ್ಸು, ಪರಿಪೂರ್ಣತೆ ಹಾಗೂ ಸಂಕೋಲೆಗಳಿಂದ ವಿಮುಕ್ತಿಯೇ ಆಗಿದೆ. ಇದು ಬುದ್ಧನ ಜೀವನದ ಕತೆಯನ್ನು ಪ್ರತಿಬಿಂಬಿಸುವ ಬೃಹತ್ ಜ್ಞಾನಕೋಶ “ಸ್ವರ್ಣ ಖಜಾನೆ“ ಯಾಗಿದೆ ಎಂದೇ ವಿಶ್ಲೇಷಿಸಲಾಗಿದೆ.

About the Author

ಸಿ.ಎಚ್. ರಾಜಶೇಖರ್

ಲೇಖಕ ಸಿ.ಎಚ್. ರಾಜಶೇಖರ್ ಅವರು ಸಮಗ್ರ ಬುದ್ಧ ಸಾಹಿತ್ಯ ಮಾಲೆ ಬಿಡಿ ಸಂಪುಟಗಳನ್ನು ರಚಿಸಿದ್ದಾರೆ. 'ಬುದ್ಧ ತನ್ನ ತಾ ಗೆದ್ದವನೇ ಸಂಗ್ರಾಮ ವಿಜೇತನೆಂದ', 'ಬುದ್ಧ ಜ್ಞಾನದ ಔಷಧಕ್ಕೆ ಸಂಭಾವನೆ ಇಲ್ಲೆಂದ', 'ಬುದ್ಧ ನಿನ್ನ ಅಂತರಂಗದ ಧ್ವನಿಯೇ ಭಾಗ್ಯವೆಂದ', 'ಬುದ್ಧ ಹೀಗೆ ಬದುಕಿ ಮೃತ್ಯುವನ್ನು ಜಯಿಸಿರೆಂದ', 'ಸಿದ್ಧಾರ್ಥ ಗೌತಮ ಬುದ್ಧನಾದ ಪರಿ', 'ಬುದ್ಧ ನಂದನ ಬೀಳ್ಕೊಟ್ಟ ಕಾಮ ತೊರೆಸಿ ಕಲ್ಯಾಣದತ್ತ', 'ಬುದ್ಧ ಮೋಹ ನಿರ್ಮೋಹಗಳ', 'ಬುದ್ಧ ನೀ ಅಲ್ಲೇ ನಿಲ್ಲೆಂದ ಅಂಗುಲೀಮಾಲಾ', 'ಬುದ್ಧನ ಸಂಧಿಸಿದ ಅಮ್ರಪಾಲಿ ಗಂಗೆಯಂತಾದಳು', 'ಬುದ್ಧ ಸಾಸಿವೆಕಾಳಲ್ಲಿ ಸಾಸಿರ ಕಥೆ ಸಾರಿದ ಕಿಸಾಗೋತಮಿಗೆ', 'ಹೆಣ್ಣು ಎಂದರೆ ...

READ MORE

Related Books