’ಹಿಂದುತ್ವ ಮತ್ತು ದಲಿತರು’ ಬಿ ಗಂಗಾಧರ ಮೂರ್ತಿ ಅವರ ಈ ಗ್ರಂಥದಲ್ಲಿ ಸೇರ್ಪಡೆಯಾಗಿರುವ ಲೇಖನಗಳು ಹಿಂದುತ್ವ ಶಕ್ತಿಗಳು ದಲಿತರನ್ನು ತಮ್ಮತ್ತ ಸೆಳೆದುಕೊಳ್ಳುತ್ತಿರುವ ಪ್ರಕ್ರಿಯೆಯ ಬಗ್ಗೆ ತಾತ್ವಿಕವೂ ಅನುಭವಜನ್ಯವೂ ಆದ ವಿಶ್ಲೇಷಣೆಗಳ ಮೂಲಕ ಸಾಕಷ್ಟು ಬೆಳಕು ಚೆಲ್ಲುತ್ತವೆ.
ಕ್ರಿಯಾಶೀಲ ಚಳವಳಿಗಾರರು ಮತ್ತು ವಿದ್ವಾಂಸರು ಬರೆದಿರುವ ಲೇಖನಗಳು ಈ ಗ್ರಂಥದಲ್ಲಿ ಸೇರ್ಪಡೆಯಾಗಿವೆ. ಈ ಲೇಖನಗಳಲ್ಲಿ ದಲಿತರ ಸಾಮಾಜಿಕ, ಸಾಂಸ್ಕೃತಿಕ, ಸೈದ್ದಾಂತಿಕ ಮತ್ತು ರಾಜಕೀಯ ಜೀವನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಚರ್ಚಿಸಲಾಗಿದೆ. ಜೊತೆಗೆ, ಅವರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅಗತ್ಯವಾದ ಮುನ್ನೋಟದ ಬಗ್ಗೆ ಬೆಳಕು ಹರಿಸುವ ಲೇಖನಗಳೂ ಇಲ್ಲಿವೆ. ಇತ್ತೀಚಿನ ವಿದ್ಯಮಾನಗಳು ಸೃಷ್ಟಿಸಿರುವ ಸಮಸ್ಯೆಗಳ ಕುರಿತ ಸ್ವರೂಪದ ಸಂವಾದಕ್ಕೆ ಇಲ್ಲಿನ ಲೇಖನಗಳು ದಾರಿಮಾಡಿಕೊಡುತ್ತವೆ.
ಲೇಖಕ ಪ್ರೊ. ಬಿ. ಗಂಗಾಧರ ಮೂರ್ತಿ ಅವರು ಮೂಲತಃ ಹೊಳೆನರಸೀಪುರದವರು. ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವೀಧರರು. ಸುಮಾರು 30 ಬೊಧನೆ ಮಾಡಿದವರು. ’’ನವ್ಯ ಕತೆಗಳು” ಅವರು ಬರೆದ ವಿಮರ್ಶಾ ಲೇಖನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ನೀಡಿ ಗೌರವಿಸಿದೆ. ಅನುವಾದ ಕ್ಷೇತ್ರದಲ್ಲಿ ಇವರ ಸೇವೆ ಗಮನಿಸಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಪ್ರಶಸ್ತಿ ನೀಡಿ ಗೌರವಿಸಿದೆ. ಸೂಫಿ ಕಲ್ಚರ್ ಸಂಪಾದಕ ಸಮಿತಿಯಲ್ಲಿ ಪ್ರವಾಚಕರಾಗಿದ್ದರು. ಭಾರತ ಜ್ಞಾನ-ವಿಜ್ಞಾನ ಸಮಿತಿ ಪ್ರಕಟಿಸುತ್ತಿದ್ದ ‘ಟೀಚರ್’ ಮಾಸಿಕದ ಮುಖ್ಯ ಸಂಪಾದಕರಾಗಿದ್ದರು. ಕರ್ನಾಟಕದ ಗೌರಿಬಿದನೂರು ನಗರದಲ್ಲಿ ವಾಸವಿದ್ದು, ವಿದುರಾಶ್ವತ ಫ್ರೀಡಂ ಮೆಮೊರಿಯಲ್ ಮ್ಯೂಜಿಯಂ ಸಂಸ್ಥೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ...
READ MORE