ಹದಿನೇಳು ಲಲಿತ ಪ್ರಬಂಧಗಳ ಸಂಕಲನ ಹಿಟ್ಟಿನ ಗಿರಣಿ ಕಿಟ್ಟಪ್ಪ. ಈ ಕೃತಿಯಲ್ಲಿನ ಪ್ರತಿಯೊಂದು ಪ್ವಿರಬಂಧವೂ ಭಿನ್ನ ವಿಷಯ ವಸ್ತು ಹೊಂದಿದೆ. ಗ್ರಾಮೀಣ ಪರಿಸರ , ಜನಜೀವನದೊಂದಿಗೆ ತಳಕು ಹಾಕಿಕೊಂಡಿವೆ ಹಾಸ್ಯ ವ್ಯಂಗ್ಯ, ವಿಷಾದ, ನೋವು, ಹೀಗೆ ಹತ್ತು ಹಲವು ಸನ್ನಿವೇಶಕ್ಕೆ ಅನುಗುಣವಾಗಿ ಚಿತ್ರಿಸಲಾಗಿದೆ . ಈ ಕೃತಿಗೆ 2017 ನೇ ಸಾಲಿನ ಕಸಾಪ ಬೆಂಗಳೂರು ಇವರಿಂದ ದಿ.ಡಿ.ಮಾಣಿಕರಾವ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಬಂದಿದೆ
ಲೇಖಕ ಶರಣಗೌಡ ಪಾಟೀಲ ಅವರು ಕಲಬುರಗಿ ಜಿಲ್ಲೆಯ ತಿಳಗೂಳ ಗ್ರಾಮದವರು. ಸ್ನಾತಕೋತ್ತರ ಪದವೀಧರರು. ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೃತಿಗಳು: ಹಿಟ್ಟಿನ ಗಿರಣಿ ಕಿಟ್ಟಪ್ಪ (ಲಲಿತ ಪ್ರಬಂಧಗಳ ಸಂಕಲನ)’, ತೊರೆದ ’ಗೂಡು (ಕಾದಂಬರಿ), ಕೆಂಪು ಶಲ್ಯ ಫಕೀರೂ ಹಾಗೂ ಇತರ ಕಥೆಗಳು (ಕಥಾ ಸಂಕಲನ), ಕಾಳು ಕಟ್ಟದ ಕಣ್ಣೀರು, ಭೀಮಾ ತೀರದ ತಂಗಾಳಿ (ಕಾದಂಬರಿಗಳು) ಪ್ರಶಸ್ತಿ-ಪುರಸ್ಕಾರಗಳು: ಇವರ ‘ಹಿಟ್ಟಿನ ಗಿರಣಿ ಕಿಟ್ಟಪ್ಪ ಕೃತಿಗೆ 2017-18 ನೇ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಡಿ ಮಾಣಿಕರಾವ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಲಭಿಸಿದೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ. ಶಿಕ್ಷಕರ ಕಲ್ಯಾಣ ನಿಧಿಯ ರಾಜ್ಯ ಮಟ್ಟದ ...
READ MORE