ಸಾಹಿತಿ ಟಿ. ಪಿ. ಅಶೋಕ ಅವರ ಎರಡನೇ ಕೃತಿ-ಹೊಸ ಹೆಜ್ಜೆ ಹೊಸ ಹಾದಿ. ಒಟ್ಟು ಹನ್ನೆರಡು ಲೇಖನಗಳಿವೆ. ಅವರ ‘ನವ್ಯ ಕಾದಂಬರಿಯ ಪ್ರೇರಣೆಗಳು’ ಕೃತಿಯ ಮುಂದುವರೆದ ಭಾಗವೇ ಈ ಕೃತಿ ಎನ್ನಬಹುದು. ಕನ್ನಡ ಸಾಹಿತ್ಯದಲ್ಲಿ ಪ್ರಚಲಿತದಲ್ಲಿರುವ ಮತ್ತು ಪ್ರಸ್ತುತವಾಗಿರುವ ‘ಸಾಹಿತ್ಯ ಮತ್ತು ಬದ್ಧತೆ’ ಹಾಗೂ ‘ಸಾಹಿತ್ಯದಲ್ಲಿ ಆರೋಗ್ಯಕರ ಮತ್ತು ಅನಾರೋಗ್ತಕರ ಪ್ರವೃತ್ತಿ’ ಎಂಬ ಮಾತುಗಳಿಗೆ ಇಲ್ಲಿಯ ಲೇಖನಗಳು ಪೂರಕವಾಗಿರುವುದನ್ನು ಕಾಣಬಹುದು.
ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...
READ MORE