ಪಾ. ವೆಂ. ವ್ಯಕ್ತಿ ಚಿತ್ರಣದಲ್ಲಿ ಸಿದ್ಧಹಸ್ತರು. ಇದುವರೆಗೆ 100ಕ್ಕೆ ಮೇಲ್ಪಟ್ಟು ವ್ಯಕ್ತಿ ಚಿತ್ರಣವನ್ನು ರಚಿಸಿದ್ದು ಪ್ರಸ್ತುತ ಈ ಕೃತಿyಲ್ಲಿ ಒಟ್ಟು 16 ಹಿರಿಯ ಸಾಹಿತಿಗಳ ಬಾಲ್ಯ, ಅನನ್ಯ ಸಾಧನೆ, ಹಾಗೂ ಪ್ರಮುಖವಾಗಿ ಕೃತಿಗಳ ಬಗ್ಗೆ, ಅವರ ವಿಚಾರಧಾರೆಗೆ ಹೆಚ್ಚು ಪ್ರಾಧಾನ್ಯತೆ ನೀಡಿ ಬರೆದ ಕೃತಿ ಇದು.
ಲಾಂಗೂಲಾಚಾರ್ಯ ಎಂದು ಖ್ಯಾತರಾಗಿದ್ದ ಪಾಡಿಗಾರು ವೆಂಕಟರಮಣ ಆಚಾರ್‍ಯರು ಜನಿಸಿದ್ದು 1933ರಲ್ಲಿ. ಉಡುಪಿಯವರಾದ ಪಾ.ವೆಂ. ಅವರ ತಂದೆ ಲಕ್ಷ್ಮೀರಮಣಾಚಾರ್ಯ, ತಾಯಿ ಸೀತಮ್ಮ. ಶಿಕ್ಷಣವನ್ನು ಉಡುಪಿಯಲ್ಲಿ ಪಡೆದ ಅವರು ಶಾಲೆಯಲ್ಲಿ ಕಲಿತಿದ್ದು ಕೇವಲ ಮ್ಯಾಟ್ರಿಕ್ ವರೆಗೆ ಮಾತ್ರ. ಮನೆಯ ಆರ್ಥಿಕ ಸ್ಥಿತಿ ಹೆಚ್ಚಿನ ವ್ಯಾಸಂಗಕ್ಕೆ ಅನುವು ಮಾಡಿಕೊಡಲಿಲ್ಲ. ಕೆಲ ಕಾಲ ಅಂಗಡಿ ಹಾಗೂ ಹೊಟೇಲುಗಳಲ್ಲಿ ಗುಮಾಸ್ತರಾಗಿ ಮತ್ತು ಕೆಲವೆಡೆ ಶಿಕ್ಷಕರಾಗಿ ವೃತ್ತಿ ಜೀವನ ನಡೆಸಿದರು. 1937 ರಲ್ಲಿ ಆರಂಭವಾದ ಉಡುಪಿಯ 'ಅಂತರಂಗ' ಪತ್ರಿಕೆಯ ಸಂಪಾದಕ ಮಂಡಳಿಯ ಸದಸ್ಯರಾಗಿ ಪತ್ರಿಕೋದ್ಯಮಕ್ಕೆ ಬಂದ ಪಾವೆಂ ಅವರು 1941ರಲ್ಲಿ 'ಲೋಕ ಶಿಕ್ಷಣ ಟ್ರಸ್ಟ್' ಸೇರಿದರು. ...
READ MORE