‘ಕನ್ನಡ ರಂಗಭೂಮಿಯ ಹುಲಿ’ ಎಂದೇ ಹೆಸರಾಗಿದ್ದ ಹುಲಿಮನೆ ಸೀತಾರಾಮಶಾಸ್ತ್ರಿ ಅವರು ನಿಧನರಾಗಿ 20 ವರ್ಷಗಳು ಸಂದಿವೆ. ಕಂಪನಿ ನಾಟಕಗಳು ಜನಪ್ರಿಯವಾಗಿದ್ದ ಕಾಲದಲ್ಲಿ ಸೀತಾರಾಮಶಾಸ್ತ್ರಿಗಳು ಸ್ವಂತ ನಾಟಕ ಕಂಪನಿ ಕಟ್ಟಿ ನಾಡಿನಾದ್ಯಂತ ಜಯಭೇರಿ ಹೊಡೆದಿದ್ದರು. ತಮ್ಮ ವಿಶಿಷ್ಟ ನಾಟಕಗಳ ಮೂಲಕ, ಪಾತ್ರಗಳ ಮೂಲಕ ತುಂಬ ಹೆಸರು ಮಾಡಿದ್ದ ಶಾಸ್ತ್ರಿಗಳು, ಜೀವನದುದ್ದಕ್ಕೂ ಹೋರಾಟವನ್ನೇ ಮಾಡಿದರು. ಇವರ ಜೀವನದ ಚರಿತ್ರೆಯನ್ನು ಕಟ್ಟಿಕೊಡುವ ಕೃತಿ ಇದು.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಪದವಿ ಕಾಲೇಜಿನಲ್ಲಿ ಸುದೀರ್ಘ - ಅವಧಿಯವರೆಗೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಆರ್ ಪಿ ಹೆಗಡೆ ಅವರು ಸದ್ಯ ನಿವೃತ್ತಿ ಜೀವನ ನಡೆಸುತ್ತಿದ್ದಾರೆ. ಅನುವಾದ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿದ್ದಾರೆ. ಕನ್ನಡದಲ್ಲಿ ಎಂಟು, ಹಿಂದಿಯಿಂದ ಕನ್ನಡಕ್ಕೆ ಅನುವಾದಿಸಿದ 25ಕ್ಕೂ ಹೆಚ್ಚು ಕೃತಿಗಳು ಮತ್ತು ಕನ್ನಡದಿಂದ ಹಿಂದಿಗೆ ಅನುವಾದಿಸಿದ ನಾಲ್ಕು ಕೃತಿಗಳು ಪ್ರಕಟಗೊಂಡಿವೆ. ಇದಲ್ಲದೆ ಹಿಂದಿಯಿಂದ ಕನ್ನಡಕ್ಕೆ ಅನುವಾದಿಸಿರುವ ಅನೇಕ ಸಣ್ಣ ಕಥೆಗಳು ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅನುವಾದ ವಿಭಾಗದಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪಡೆದಿರುವ ಹೆಗಡೆಯವರಿಗೆ ಶಿರಸಿಯ ಕವಿ ಕಾವ್ಯ ...
READ MORE