ಹುಲಿರಾಯನ ಆಕಾಶವಾಣಿ

Author : ಟಿ. ಎಸ್.‌ ಗೋಪಾಲ್

₹ 235.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಈಸ್ಟ್, ಬೆಂಗಳೂರು - 560 001
Phone: 080 - 22161900 / 22161901 / 22161902

Synopsys

ವೈಜ್ಞಾನಿಕ ಸಾಧನಗಳನ್ನು ಬಳಸಿ ಹುಲಿಯಂತಹ ಅದ್ಭುತಜೀವಿಯ ಉಳಿವಿಗಾಗಿ ಶ್ರಮಿಸಿದವರಲ್ಲಿ ಕೆ.ಉಲ್ಲಾಸ ಕಾರಂತರಂಥವರು ಭಾರತದಲ್ಲೇ ಏಕೆ, ಇಡೀ ಜಗತ್ತಿನಲ್ಲೇ ಮತ್ತೊಬ್ಬರಿಲ್ಲ. ಹುಲಿಗಳ ಬದುಕಿನ ಬಗೆಗೆ ಇಪ್ಪತ್ತು ವರ್ಷಗಳಿಗೂ ಹೆಚ್ಚು ಕಾಲ ತತ್ಪರತೆಯಿಂದ ಅಧ್ಯಯನ ಮಾಡಿದ ಉಲ್ಲಾಸ ಕಾರಂತರು ಭಾರತದ ಅತಿಕುಶಲ ಕ್ಷೇತ್ರ ಜೀವಶಾಸ್ತ್ರಜ್ಞರಾಗಿಯೂ ಹುಲಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸಿ ಯಶ ಕಂಡ ಸಂರಕ್ಷಣಾವಾದಿಯಾಗಿಯೂ ವಿಶ್ವದ ಗಮನ ಸೆಳೆದಿದ್ದಾರೆ. ಅವರ ವೈಜ್ಞಾನಿಕ ಕಾರ್ಯಕುಶಲತೆ, ಸಂರಕ್ಷಣಾವಾದಿಯಾಗಿ ಕಾರಂತರ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹುಲಿ ಮತ್ತು ಬಲಿಪ್ರಾಣಿಗಳ ಗಣತಿಗಾಗಿ ವಿಶ್ವಸನೀಯ ತಂತ್ರಗಳನ್ನು ಅಭಿವೃದ್ಧಿಪಡಿಸಿರುವ ಕಾರಂತರು, ಇವೆರಡರ ಸಂಖ್ಯೆಗಳ ನಡುವೆ ಇರುವ ಸಂಬಂಧವನ್ನು ಸ್ಪಷ್ಟಪಡಿಸಿದ್ದಾರೆ. ವಿಮರ್ಶೆ: ಹುಲಿ - ಚಿರತೆಗಳಂಥ ಮಾರ್ಜಾಲಗಳಿಗೆ ರೇಡಿಯೋ ಕಾಲರ್ ತೊಡಿಸಿ ಅವುಗಳ ಚಲನ ವಲನ, ಅವುಗಳ ಸಂಖ್ಯೆಯಲ್ಲಾಗುವ ಏರಿಳಿತ ಇವುಗಳ ಮೇಲೆ ಪಾಳತಿ ಇಡುವುದೇ ಉಲ್ಲಾಸ ಕಾರಂತರ ಗುರಿ ಎಂದು ಬರೆಯುತ್ತಾರೆ ಟಿ.ಎಸ್.ಗೋಪಾಲ್

About the Author

ಟಿ. ಎಸ್.‌ ಗೋಪಾಲ್

ಟಿ. ಎಸ್. ಗೋಪಾಲ್ ಅವರು ಕನ್ನಡದ ಲೇಖಕರು. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳ ಬಗ್ಗೆ ಆಸಕ್ತಿ ಹೊಂದಿರುವ ಇವರು, ಆ ಕುರಿತ ಲೇಖನಗಳು, ಪುಸ್ತಕಗಳನ್ನು ಬರೆದಿದ್ದಾರೆ. ಹೀಗೆ ಈವರೆಗೆ ಗೋಪಾಲ್‌ ಅವರು ಒಟ್ಟು 40ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿರುತ್ತಾರೆ. ಅವುಗಳಲ್ಲಿ ಅವರ 'ಕಾಡು ಕಲಿಸುವ ಪಾಠ' ಕೃತಿಗೆ ವಿಜ್ಞಾನ ವಿಷಯದಲ್ಲಿ 2013ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ದೊರೆತಿದೆ. ಅಲ್ಲದೆ ಹಲವಾರು ಲಲಿತ ಪ್ರಬಂಧಗಳು, ವಿಮರ್ಶಾ ಲೇಖನಗಳು ಹಾಗೂ ವನ್ಯಜೀವಿಸಂರಕ್ಷಣೆಯನ್ನು ಕುರಿತ ಲೇಖನಗಳು ನಾಡಿನ ಪತ್ರಿಕೆಗಳಲ್ಲಿ ಹಾಗೂ ಆಕಾಶವಾಣಿಯಲ್ಲಿ ಪ್ರಕಟವಾಗಿವೆ. ...

READ MORE

Related Books