‘ಇತಾಲಿಯಾ ನಾನು ಕಂಡಂತೆ’ ಕೃತಿಯು ಕು.ಶೀ ಹರಿದಾಸ ಭಟ್ಟ ಅವರ ಪ್ರವಾಸ ಕಥನವಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ; ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚು ದೀರ್ಘವಾಗಿ ಐತಿಹಾಸಿಕ ಪರಂಪರೆ ಕನ್ನಡ ನಾಡಿನದು. ಈ ಅವಧಿಯಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗಳು ಸಮೃದ್ಧವಾಗಿ ಶ್ರೀಮಂತವಾಗಿ ಬೆಳೆದು, ಈ ನಾಡಿನ ಇತಿಹಾಸವನ್ನು ಭವ್ಯವಾಗಿದೆ. ಒಂದು ನಾಡಿನ ಅಂತಃಸತ್ವ ಅಡಕವಾಗಿರುವುದೇ ಅದರ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ. ಈ ನೆಲೆಗಟ್ಟು ಭದ್ರವಾಗಿರಬೇಕಾದರೆ ಸಾಂಸ್ಕೃತಿಕ ಪರಂಪರೆ ಉತ್ಕರ್ಷಕ್ಕೆ ಏರಲು ಅನ್ನತ್ಯ ಸಾಧಿಸಲು ನಿರಂತರವಾಗಿ ಪ್ರಯತ್ನಗಳು ನಡೆಯಬೇಕು. ಭಾರತೀಯ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿ ಬೆಸೆದುಕೊಂಡಿದ್ದರೂ ಕನ್ನಡ ತನ್ನದೇ ಆದ ವಿಶಿಷ್ಟ ಸಂಸ್ಕಾರಗಳನ್ನು, ಸಂಸ್ಕೃತಿಯನ್ನು ಹೊಂದಿದೆ ಎನ್ನುತ್ತದೆ ಈ ಕೃತಿ.
©2024 Book Brahma Private Limited.