ಪ್ರಸಿದ್ದ ಕಾದಂಬರಿಕಾರ ಎಸ್. ಎಲ್. ಭೈರಪ್ಪನವರ ’ಜಲಪಾತ’ ಕಾದಂಬರಿಯು ಸೃಷ್ಟಿಶಕ್ತಿಯಿಂದ ವಿಜೃಂಭಿಸುವ ಜೀವನಪ್ರವೃತ್ತಿ ಮತ್ತು ಆ ಶಕ್ತಿಯನ್ನು ಹತ್ತಿಕ್ಕುವ ಜೀವನಪರಿಸ್ಥಿತಿಯ ತಾಕಲಾಟವನ್ನು ಒಳಗೊಂಡಿದೆ.
ನೀರು ಮತ್ತು ಮಣ್ಣಿನ ಶಕ್ತಿಯಿಂದ ಕಂಗೊಳಿಸುವ ವನಶ್ರೀ, ಗಂಡು ಹೆಣ್ಣುಗಳ ಮೂಲಶಕ್ತಿಯಾದ ಜೀವನವಿಕಾಸ, ಮತ್ತು ಬೌದ್ಧಿಕಸ್ತರದಲ್ಲಿ ಆವಿರ್ಭವಿಸುವ ಕಲಾಸೌಂದರ್ಯ-ಇವು ಮೂರು, ವಿವಿಧಸ್ತರಗಳಲ್ಲಿ ಪ್ರಕಟವಾಗುವ ಒಂದೇ ಮೂಲಶಕ್ತಿ ಎಂಬುದನ್ನು ಕಾದಂಬರಿಯ ಅಂಗಗಳಾಗಿ ಬೆಳೆದಿರುವ ಪ್ರತೀಕಗಳು ಎತ್ತಿತೋರಿಸುತ್ತವೆ.
ಸಂಯೋಗದ ಕರೆ ಮತ್ತು ಕ್ರಿಯೆ, ಗರ್ಭದ ವಿಕಾಸ, ಜನನಕ್ಕೆ ಪೂರ್ವಭಾವಿಯಾದ ನೋವಿನ ಅನುಭವ, ಮೊದಲಾದ ಸೃಷ್ಟಿಯ ಹಲವು ಹಂತಗಳನ್ನು ಅನುಭವದ ಹೊಚ್ಚ ಹೊಸತನದಿಂದ ಭಾಷೆಯಲ್ಲಿ ಹಿಡಿದಿಡಲು ಅನುಕೂಲವಾಗುವಂತೆ ಕಾದಂಬರಿಯ ಕತೆಯು, ಅದರ ಮೂಲ ಪಾತ್ರಗಳಾದ ಒಂದು ಗಂಡು ಮತ್ತು ಅದರ ಹೆಣ್ಣಿನ ಸ್ವಂತ ಅನುಭವದ ವರ್ಣನೆಯ ರೀತಿಯಲ್ಲಿ ಸಾಗುತ್ತದೆ.
ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...
READ MORE