ಉತ್ತರ ಕರ್ನಾಟಕದ ಉತ್ತಮ ಜಾನಪದ ವಿದ್ವಾಂಸರಲ್ಲಿ ಜ್ಯೋತೆಪ್ಪ ಶಿವಪ್ಪ ಹೊಸೂರ ಅವರು ಒಬ್ಬರು. ಜನಪದ ಸಾಹಿತ್ಯ ಸಂಗ್ರಹ, ಸಂಪಾದನೆ, ಸಂಶೋಧನೆ, ಪ್ರಕಟಣೆ, ವಿಶ್ಲೇಷಣೆಗಳಲ್ಲಿ ಸ್ವಂತ ಛಾಪು ಮೂಡಿಸಿದ್ದಾರೆ. ಜಾನಪದ ಮೂಲ ತತ್ವಗಳ ಹಿನ್ನೆಲೆಯಲ್ಲಿ ವಿವೇಚಿಸಿದ್ದಾರೆ. ಪ್ರಸ್ತುತ ಕೃತಿಯಲ್ಲಿ ಹೊಸೂರ ಅವರ ಬದುಕು ಬರಹಗಳ ಕುರಿತು ಲೇಖಕ ಸಿ.ಕೆ. ನಾವಲಗಿ ಅವರು ಸಂಕ್ಷಿಪ್ತ ಚಿತ್ರಣ ನೀಡಿದ್ದಾರೆ.
ಡಾ. ಸಿ.ಕೆ. ನಾವಲಗಿ ಎಂತಲೇ ಪರಿಚಿತರಾಗಿರುವ ಲೇಖಕ ಚೆನ್ನಬಸಪ್ಪ ಕಲ್ಲಪ್ಪ ನಾವಲಗಿ ಅವರು 1956 ಆಗಸ್ಟ್ 1ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬಸರಕೋಡ ಗ್ರಾಮದಲ್ಲಿ ಜನಿಸಿದರು. ಕನ್ನಡ ಜಾನಪದ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಕನ್ನಡ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ, ಪಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ. ಇವರು ರಚಿಸಿದ ಪ್ರಮುಖ ಕೃತಿಗಳೆಂದರೆ ಜಾನಪದ ಸ್ಪಂದನ, ಬೇಂದ್ರೆಯವರ ಕಾವ್ಯದ ಮೇಲೆ ಜಾನಪದ ಪ್ರಭಾವ, ಗಾದೆಗಳಲ್ಲಿ ಹಾಸ್ಯ, ಶರಣ ವಿಚಾರವಾಹಿನಿ, ವಚನ ಸಾಹಿತ್ಯ ಮತ್ತು ಜಾನಪದ, ದಿಕ್ಸೂಚಿ, ವಚನ ಸಾಹಿತ್ಯದಲ್ಲಿ ಜಾನಪದ ಅಂಶಗಳು, ಗ್ರಾಮೀಣ ಗ್ರಹಿಕೆ, ಕಥನ ಕವನ ಸಂಚಯ, ...
READ MORE