ಹಿರಿಯ ವಿಮರ್ಶಕ ಸಿ.ಎನ್.ರಾಮಚಂದ್ರನ್ ಅವರ ಕೃತಿ ’ ಕೆ.ಎಸ್. ನರಸಿಂಹಸ್ವಾಮಿ ಜೀವನ ಮತ್ತು ಸಾಹಿತ್ಯ ’. ಮೈಸೂರು ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿ ಅವರ ಜೀವನ ಮತ್ತು ಸಾಹಿತ್ಯವನ್ನು ಕುರಿತು ತಿಳಿಸುವ ಈ ಕೃತಿ ಕೆ.ಎಸ್.ನ ಅವರ ಸಮಗ್ರ ಜೀವನ ದರ್ಶನವನ್ನು ಸರಳವಾಗಿ, ಅಷ್ಟೇ ಸೂಕ್ಷ್ಮವಾಗಿ ತೆರೆದಿಡುವಂತದ್ದು.
ಕೆ.ಎಸ್. ನ ಅವರ ಕಾವ್ಯ , ನೆನಪು ಮತ್ತು ಸಂದರ್ಶನಗಳನ್ನು ಸದಾ ನೆನಪಿನಲ್ಲಿಡುವಂತೆ ಅವರ ಸರಳ, ವಿನಯಪೂರ್ಣ ವ್ಯಕ್ತಿತ್ವದ ಪರಿಚಯವನ್ನು ಮಾಡಿಸುತ್ತದೆ.
ರಾಮಚಂದ್ರನ್ ಅವರು ಜನಿಸಿದ್ದು (ಜ ೧೯೩೬) ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಅಮೆರಿಕೆಯ ಮಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಪದವಿ. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಅಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ್ದಾರೆ. ೧೯೯೬ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಅಧ್ಯಾಪಕರಾಗಿ ನಿವೃತ್ತಿ. ಸಾಹಿತ್ಯ ವಿಮರ್ಶೆ, ವಸಾಹತೋತ್ತರ ಚಿಂತನೆ, ತೌಲನಿಕ ಸಾಹಿತ್ಯ, ಪರಂಪರೆ ಪ್ರತಿರೋಧ, ಎಡ್ವರ್ಡ್ ಸೈದ್, ಬಯಲುರೂಪ, ರಕ್ತ-ರೂಪಣೆ, ಹೊಸ ಮಡಿಯ ಮೇಲೆ ಚದುರಂಗ, ಗಿರೀಶ ಕಾರ್ನಾಡರ ಚಾರಿತ್ರಿಕ ನಾಟಕಗಳು ವಿಮರ್ಶಾ ಕೃತಿಗಳು. ಶೋಧ ಕಾದಂಬರಿ, ಕಸಾಂದ್ರ ಕಥಾ ಸಂಕಲನ. ಇನಾಂದಾರ್ ಪ್ರಶಸ್ತಿ, ...
READ MORE